ಬೆಂಗಳೂರು: ರಾಜ್ಯದ ಜನತೆಗೆ ಗುಡ್ ನ್ಯೂಸ್ ಎನ್ನುವಂತೆ ನವೆಂಬರ್.28ರಂದು 5,000 ಅಂಗನವಾಡಿಗಳಲ್ಲಿ ಎಲ್ ಕೆ ಜಿ, ಯು ಕೆ ಜಿ ಆರಂಭವಾಗಲಿದೆ.
ಕರ್ನಾಟಕದಲ್ಲಿ ಅಂಗನವಾಡಿ ಆರಂಭಗೊಂಡು 50 ವರ್ಷ ಪೂರೈಸುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರಿನ ಅರಮನೆ ಮೈದಾನದಲ್ಲಿ ನವೆಂಬರ್ 28ರಂದು ನಡೆಯಲಿರುವ ಕಾರ್ಯಕ್ರಮದಲ್ಲಿ ಪ್ರಮುಖ ಮೂರು ಯೋಜನೆಗಳಿಗೆ ಚಾಲನೆ ನೀಡಲಾಗುವುದು.
ಇದೊಂದು ಹೊಸ ಇತಿಹಾಸ ಸೃಷ್ಟಿಸುವ ಕಾರ್ಯಕ್ರಮವಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ.
ಐಸಿಡಿಎಸ್ ಸುವರ್ಣ ಮಹೋತ್ಸವ, ಅಕ್ಕ ಪಡೆ ಲೋಕಾರ್ಪಣೆ, ಗೃಹಲಕ್ಷ್ಮಿ ಬ್ಯಾಂಕ್ ಗೆ ಚಾಲನೆ ಕಾರ್ಯಕ್ರಮಗಳು ಅತ್ಯಂತ ಅರ್ಥಪೂರ್ಣವಾಗಿ ಅಂದು ನಡೆಯಲಿದ್ದು, ಅಂಗನವಾಡಿ ಕಾರ್ಯಕರ್ತರು ಹಾಗೂ ಸಹಾಯಕಿಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿ ಗೊಳಿಸಬೇಕು ಎಂದು ಅವರು ಕರೆ ನೀಡಿದರು.
ದೇಶಕ್ಕೆ ಸ್ವಾತಂತ್ರ್ಯ ತಂದು ಕೊಟ್ಟ ಪಕ್ಷ ಕಾಂಗ್ರೆಸ್, ದೇಶಕಟ್ಟಿದ್ದು ಕಾಂಗ್ರೆಸ್ ಪಕ್ಷ. ಕಾಂಗ್ರೆಸ್ ಅಂದರೆ ಗ್ಯಾರಂಟಿ ಸರ್ಕಾರ ಅಂತ ಅರ್ಥ. ಅಧಿಕಾರಕ್ಕೆ ಬಂದಾಗಲೆಲ್ಲಾ ಮಹಿಳೆಯರ ಪರ ಯೋಜನೆಗಳನ್ನು ಜಾರಿಗೊಳಿಸುತ್ತಿದೆ ಎಂದು ಹೆಬ್ಬಾಳಕರ್ ಹೇಳಿದರು.




