ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಆರೋಪ ಎದುರಿಸುತ್ತಿರುವ ಉದ್ಯಮಿ ಅನಿಲ್ ಅಂಬಾನಿಗೆ ಮತ್ತಷ್ಟು ಸಂಕಷ್ಟ ಎದುರಾಗಿದ್ದು, ಅನಿಲ್ಗೆ ಸೇರಿದ 1,400 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಜಾರಿ ನಿರ್ದೇಶನಾಲಯ (ಇ.ಡಿ.) ಗುರುವಾರ ಜಪ್ತಿ ಮಾಡಿಕೊಂಡಿದೆ. ಇದಕ್ಕೂ ಮುನ್ನ 7,500 ಕೋಟಿ ರೂ.ಮೌಲ್ಯದ ಆಸ್ತಿಯನ್ನು ವಶಕ್ಕೆ ಪಡೆಯಲಾಗಿತ್ತು.
ಇದರೊಂದಿಗೆ ಅನಿಲ್ ಅಂಬಾನಿ ಅವರಿಗೆ ಸೇರಿದ 9,000 ಕೋಟಿ ರೂ.ಗೂ ಹೆಚ್ಚಿನ ಆಸ್ತಿ ಇ.ಡಿ. ವಶದಲ್ಲಿದೆ. ಈ ಬಗ್ಗೆ ಪ್ರಸ್ತುತ ರಿಲಯನ್ಸ್ ಸಂಸ್ಥೆಯಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ.ಹಲವು ಬ್ಯಾಂಕ್ಗಳಿಗೆ ಸಾಲ ಮರುಪಾವತಿಸದ ಕಾರಣ ಅನಿಲ್ ಸಂಕಷ್ಟಕ್ಕೆ ಸಿಲುಕಿದ್ದಾರೆ.




