ಧಾರವಾಡ : ಧಾರವಾಡದಲ್ಲಿ ಘೋರವಾದ ದುರಂತ ಒಂದು ಸಂಭವಿಸಿದ್ದು, ಬಾವಿಗೆ ಹಾರಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಧಾರವಾಡ ತಾಲೂಕಿನ ಚಿಕ್ಕ ಮಲ್ಲಿಗವಾಡ ಗ್ರಾಮದಲ್ಲಿ ಈ ಒಂದು ದುರ್ಘಟನೆ ಸಂಭವಿಸಿದೆ.
ತಂದೆ ವಿಠಲ ರಾವ್ (85) ಪುತ್ರನಾರಾಯಣ ಶಿಂಧೆ (42) ಮಕ್ಕಳಾದ ಶಿವರಾಜ್ (12) ಹಾಗೂ ಶ್ರೀನಿಧಿ (10) ಆತ್ಮಹತ್ಯೆಗೆ ಶರಣಾದವರು ಎಂದು ತಿಳಿದುಬಂದಿದೆ.
ಕೌಟುಂಬಿಕ ಸಮಸ್ಯೆ ಹಿನ್ನೆಲೆಯಲ್ಲಿ ನಾಲ್ವರು ಆತ್ಮಹತ್ಯೆಗೆ ಶರಣಾಗಿರುವ ಶಂಕೆ ವ್ಯಕ್ತವಾಗುತ್ತಿದೆ. ಘಟನೆ ಕುರಿತು ಧಾರವಾಡ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.




