ಬೆಂಗಳೂರು: ನಗರದ ಶಕ್ತಿ ಕೇಂದ್ರ ವಿಧಾನಸೌಧದ ಮುಂದೆಯೇ ನೇಪಾಳಿ ಗ್ಯಾಂಗ್ ಪುಂಡಾಟ ಮೆರೆದಿತ್ತು. ಈ ಸಂಬಂಧ 11 ಆರೋಪಿಗಳನ್ನು ಎಡೆಮುರಿಕಟ್ಟಿ ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಕಳೆದ ಭಾನುವಾರದಂದು ಬೆಂಗಳೂರಿನ ಹಲವೆಡೆ ತಿರುಗಾಡಿದ್ದಂತ ನೇಪಾಳಿ ಗ್ಯಾಂಗ್, ವಿಧಾನಸೌಧ, ಮೆಟ್ರೋ ನಿಲ್ದಾಣಕ್ಕೂ ಬಂದಿತ್ತು.ಈ ಗ್ಯಾಂಗ್ ಸದಸ್ಯರ ನಡುವೆಯೇ ಗಲಾಟೆಯಾಗಿ, ವಿಧಾನಸೌಧದ ಮುಂದೆಯೇ ಮಾರಾಮಾರಿ ಮಾಡಿಕೊಂಡಿದ್ದರು.
ದಿಢೀರ್ ವಿಧಾನಸೌಧದ ಮುಂದೆ ಮಾರಾಮಾರಿಯಿಂದ ಸಾರ್ವಜನಿಕರು ಬೆಚ್ಚಿ ಬಿದ್ದಿದ್ದರು. ಗುಂಪು ಚದುರಿಸೋದಕ್ಕೆ ಸ್ಥಳದಲ್ಲಿದ್ದಂತ ಪೊಲೀಸರು ಲಾಠಿ ಬೀಸಿದ್ದರು. ಆ ಬಳಿಕ ನೇಪಾಳಿ ಗ್ಯಾಂಗ್ 11 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಅಂದಹಾಗೇ ಓರ್ವ ಯುವತಿಯ ವಿಚಾರವಾಗಿ ಈ ಗಲಾಟೆಯಾಗಿದೆ ಎನ್ನಲಾಗುತ್ತಿದೆ. ಜೊತೆಗೆ ಮೊಬೈಲ್ ಕಿತ್ತುಕೊಂಡಿದ್ದಕ್ಕೆ ಈ ವಿಧಾನಸೌಧದ ಮುಂದೆಯೇ ಪುಂಡಾಟ ಮೆರಿದ್ದರು. ಈ ಗಲಾಟೆ ಸಂಬಂಧ ದೂರು ದಾಖಲಾದ ಹಿನ್ನಲೆಯಲ್ಲಿ ವಿಚಾರಣೆಯ ಬಳಿಕ ಇದೀಗ 11 ಮಂದಿಯನ್ನು ಪೊಲೀಸರು ಅರೆಸ್ಟ್ ಮಾಡಲಾಗಿದೆ.




