ಮೈಸೂರು: ನಾಯಕ ಸಮಾಜಕ್ಕೆ ಸೇರಿದ ಸಚಿವ ಸತೀಶ್ ಜಾರಕಿಹೊಳಿ ಕೂಡ ಮುಂದಿನ ದಿನಗಳಲ್ಲಿ ಮುಖ್ಯಮಂತ್ರಿಯಾಗಬೇಕಿದೆ ಎಂದು ಶಾಸಕ ಜಿ.ಟಿ.ದೇವೇಗೌಡ ಹೇಳಿದರು.
ನಗರದಲ್ಲಿ ಆಯೋಜಿಸಿದ್ದ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿ, ನಾಯಕ ಸಮಾಜ ಮೊದಲಿನಿಂದಲೂ ಹಿಂದುಳಿದಿದೆ.
ಹುಣಸೂರು ಅಥವಾ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಈ ಸಮುದಾಯಕ್ಕೆ ಹೆಚ್ಚಿನ ಬೆಂಬಲ ನೀಡುತ್ತಾ ಬಂದಿದ್ದೇನೆ. ಅನಿಲ್ ಚಿಕ್ಕಮಾದು ಅವರಿಗೆ ಹನಗೋಡು ಕ್ಷೇತ್ರದಿಂದ ಜಿಪಂ ಸದಸ್ಯನ್ನಾಗಿ ಮಾಡಿದ್ದೆ.
ಚಿಕ್ಕಮಾದು ಅವರನ್ನು ಜೆಡಿಎಸ್‌ಗೆ ಕರೆತಂದು ಎಚ್.ಡಿ.ಕೋಟೆ ಕ್ಷೇತ್ರದಲ್ಲಿ ನಿಲ್ಲುವಂತೆ ಮಾಡಿಸಿದ್ದೆ. ಇನ್ನು ಎಸ್‌ಟಿ ಸಮಾಜಕ್ಕೆ ಸೇರಿದ ಸತೀಶ್ ಜಾರಕಿಹೊಳಿ ಮುಖ್ಯಮಂತ್ರಿ ಆಗಬೇಕೆಂಬ ಕನಸು ನನಸಾಗಲಿ ಎಂದರು.




