ಆಂಧ್ರಪ್ರದೇಶ : ಆಂಧ್ರದ ಎಮ್ಮಿಗನೂರು ತಾಲೂಕಿನ ಕೋಟೆಕಲ್ ಗ್ರಾಮದಲ್ಲಿ ಇಂದು ಮುಂಜಾನೆ 5 ಗಂಟೆಗೆ ಎರಡು ಕಾರುಗಳ ನಡುವೆ ಭೀಕರ ಅಪಘಾತ ನಡೆದಿದೆ.
ಈ ಅಪಘಾತದಲ್ಲಿ ಕರ್ನಾಟಕದ 5 ಜನ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ. ಎರಡು ಕಾರುಗಳ ನಡುವೆ ಡಿಕ್ಕಿಯಾಗಿ ಒಂದೇ ಕಾರಿನಲ್ಲಿದ್ದ ಇಬ್ಬರು ಮಕ್ಕಳು ಸೇರಿ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಮೃತರನ್ನು ಕೋಲಾರದ ಚಿಕ್ಕಹೊಸಳ್ಳಿ ಗ್ರಾಮದ ನಿವಾಸಿಗಳು ಎಂದು ಹೇಳಲಾಗಿದೆ. ಇವರು ಮಂತ್ರಾಲಯದಿಂದ ರಾಘವೇಂದ್ರ ಸ್ವಾಮಿಯ ದರ್ಶನ ಮುಗಿಸಿಕೊಂಡು ಊರಿನ ಕಡೆಗೆ ವಾಪಸ್ ಬರುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಇನ್ನೊಂದು ಕಾರಿನಲ್ಲಿದ್ದವರಿಗೆ ಗಾಯಗಳಾಗಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.




