ಬೆಂಗಳೂರು : ಸಿಎಂ ಸಿದ್ದರಾಮಯ್ಯ ಅವರು ರೊಟೀನ್ ಚೆಕಪ್ ಗಾಗಿ ಮಣಿಪಾಲ್ ಆಸ್ಪತ್ರೆಗೆ ತೆರಳಿದ್ದಾರೆ.ಡಿಸಿಎಂ ಡಿಕೆ ಶಿವಕುಮಾರ್ ಜೊತೆ ಸುದ್ದಿಗೋಷ್ಟಿ ನಡೆಸಿದ ಬಳಿಕ ಸಿಎಂ ಸಿದ್ದರಾಮಯ್ಯ ಕಾವೇರಿ ನಿವಾಸದಲ್ಲಿ ಮಣಿಪಾಲ್ ಆಸ್ಪತ್ರೆಗೆ ತೆರಳಿದ್ದಾರೆ. ಅವರು ರೊಟೀನ್ ಚೆಕಪ್ ಗಾಗಿ ಸಿಎಂ ಸಿದ್ದರಾಮಯ್ಯ ಮಣಿಪಾಲ್ ಆಸ್ಪತ್ರೆಗೆ ತೆರಳಿದ್ದಾರೆ.
ಉಪಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ಅವರ ಜೊತೆ ಬೆಳಗ್ಗಿನ ಉಪಹಾರ ಸೇವಿಸುತ್ತಾ, ಸಿಎಂ ಸಿದ್ದರಾಮಯ್ಯ ಮಾತುಕತೆ ನಡೆಸಿದರು.
ನನ್ನ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ. ಪಕ್ಷದ ವರಿಷ್ಠರು ಹೇಳಿದಂತೆ ನಡೆದುಕೊಳ್ಳುವುದಾಗಿ ಈಗಾಗಲೇ ತಿಳಿಸಿದ್ದೇನೆ. ಈಗಲೂ ಮತ್ತು ನಾಳೆಯೂ ಅದನ್ನೇ ಹೇಳುತ್ತೇನೆ.
ಪಕ್ಷದ ವರಿಷ್ಠರು ನನಗೆ ಹಾಗೂ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರಿಗೆ ಕರೆ ಮಾಡಿ ನೀವಿಬ್ಬರೂ ಭೇಟಿ ಮಾಡಿ ಎಂದು ತಿಳಿಸಿದ್ದಾರೆ. ಹಾಗಾಗಿ ಅವರನ್ನು ನಾನು ಉಪಹಾರಕ್ಕಾಗಿ ಕರೆದಿದ್ದು, ಅಲ್ಲಿ ಚರ್ಚೆ ಮಾಡುತ್ತೇವೆ.
ಡಿ.ಕೆ ಶಿವಕುಮಾರ್ ಅವರು ಹೈಕಮಾಂಡ್ ಹೇಳಿದ್ದನ್ನು ಒಪ್ಪುವುದಾಗಿ ಹೇಳಿದ್ದಾರೆ. ಹೈಕಮಾಂಡ್ನವರು ನವದೆಹಲಿಗೆ ಕರೆದರೆ ಹೋಗುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.




