ಮುಖ್ಯಮಂತ್ರಿ ಬದಲಾವಣೆ ಸಂದರ್ಭಬಂದರೆ ದಲಿತ ಮುಖ್ಯಮಂತ್ರಿ ಮಾಡಬೇಕು ಡಾ.ಮಲ್ಲಿಕಾರ್ಜುನ ಖರ್ಗೆ ಅವರಿಗೆ ಸಿಎಂ ಮಾಡುವಂತೆ: ಮಹಾದೇವ ನೇರೆಟ್ಟಿ ಕೋಡ್ಲಾ ಮನವಿ
ಸೇಡಂ: ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ರಾಜಕೀಯದಲ್ಲಿ ಮುಖ್ಯಮಂತ್ರಿಗಳ ಬದಲಾವಣೆ ಮಾಡುವ ಸುದ್ದಿ ಮಾಧ್ಯಮದಲ್ಲಿ ಮೇಲಿಂದ ಮೇಲೆ ಪ್ರಸಾರವಾಗುತ್ತಿದೆ. ಒಂದು ವೇಳೆ ಮುಖ್ಯಮಂತ್ರಿ ಬದಲಾವಣೆ ಮಾಡುವ ಸಂದರ್ಭ ಬಂದರೆ ಎಐಸಿಸಿ ಅಧ್ಯಕ್ಷರು ಮತ್ತು ರಾಜ್ಯಸಭಾ ವಿರೋಧ ಪಕ್ಷದ ನಾಯಕರು ಮತ್ತು ದಲಿತ ಸಮುದಾಯದ ಹಿರಿಯ ನಾಯಕರು ಡಾ.ಮಲ್ಲಿಕಾರ್ಜುನ ಖರ್ಗೆ ಅವರನ್ನು ಮುಖ್ಯಮಂತ್ರಿಯಾಗಿ ಘೋಷಣೆ ಮಾಡಬೇಕೆಂದು ಮಹಾದೇವ ನೇರೆಟ್ಟಿ ಕೋಡ್ಲಾ ರವರು ಕಾಂಗ್ರೆಸ್ ವರಿಷ್ಠ ನಾಯಕರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರಲ್ಲಿ ಮನವಿ ಮಾಡಿಕೊಂಡಿದ್ದಾರೆ.
ಡಾ.ಮಲ್ಲಿಕಾರ್ಜುನ ಖರ್ಗೆಜೀಯವರು ರಾಷ್ಟ್ರ ಕಂಡ ಅಪರೂಪದ ರಾಜಕಾರಣಿಯಾಗಿದ್ದಾರೆ. ಹಿರಿಯರು, ಅನುಭವಿ ರಾಜಕಾರಣಿಯೂ ಮತ್ತು ಕಾಂಗ್ರೆಸ್ ಪಕ್ಷದ ವರಿಷ್ಠ ನಾಯಕರು ಆಗಿದ್ದಾರೆ. ತಳಮಟ್ಟದಿಂದ ಕಾಂಗ್ರೆಸ್ ಪಕ್ಷದ ಸಂಘಟನೆ ಮಾಡುತ್ತಾ ಕೆಪಿಸಿಸಿ ಅಧ್ಯಕ್ಷರಾಗಿ, ಎಐಸಿಸಿ ಅಧ್ಯಕ್ಷರ ಸ್ಥಾನಕ್ಕೆ ಬೆಳೆದು ಕಾಂಗ್ರೆಸ್ ಪಕ್ಷದ ಪ್ರಾಮಾಣಿಕ, ನಿಷ್ಠೆ ಹಾಗೂ ಶಿಸ್ತಿನ ಸಿಪಾಯಿಯಾಗಿದ್ದಾರೆ. ಅಭಿವೃದ್ಧಿಗೆ ಇನ್ನೊಂದು ಹೆಸರೇ ಅದು ಡಾ.ಮಲ್ಲಿಕಾರ್ಜುನ ಖರ್ಗೆಜೀ ಎಂದು ಹೇಳಬಹುದು. ಇಂತಹ ಹಿರಿಯ ಅನುಭವಿ ರಾಜಕಾರಣಿಯನ್ನು ಕರ್ನಾಟಕದ ಮುಖ್ಯಮಂತ್ರಿಯನ್ನಾಗಿ ಮಾಡಬೇಕೆಂದು ಮಹಾದೇವ ನೇರೆಟ್ಟಿ ಕೋಡ್ಲಾ ಅವರು ಪತ್ರಿಕಾ ಪ್ರಕಟಣೆ ಮೂಲಕ ಮನವಿ ಮಾಡಿಕೊಂಡಿದ್ದಾರೆ.
ವರದಿ :ವೆಂಕಟಪ್ಪ ಕೆ ಸುಗ್ಗಾಲ್




