Ad imageAd image

ನಾನು ಯಾವತ್ತೂ ಗುಂಪುಗಾರಿಕೆ ಮಾಡುವುದಿಲ್ಲ : ಡಿ. ಕೆ ಶಿವಕುಮಾರ್ 

Bharath Vaibhav
ನಾನು ಯಾವತ್ತೂ ಗುಂಪುಗಾರಿಕೆ ಮಾಡುವುದಿಲ್ಲ : ಡಿ. ಕೆ ಶಿವಕುಮಾರ್ 
DKS
WhatsApp Group Join Now
Telegram Group Join Now

ಬೆಂಗಳೂರು: ನನ್ನ ಹಾಗೂ ಸಿಎಂ ಸಿದ್ದರಾಮಯ್ಯ ಅವರ ಮಧ್ಯೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ನಾವೆಲ್ಲರೂ ಒಟ್ಟಿಗೆ ಕೆಲಸ ಮಾಡುತ್ತಿದ್ದೇವೆ.ರಾಜ್ಯದ ಜನ ನಮ್ಮ ಮೇಲೆ ಬಹಳ ನಿರೀಕ್ಷೆ ಹೊಂದಿದ್ದು, ನಾವು ಅದಕ್ಕೆ ತಕ್ಕಂತೆ ಕೆಲಸ ಮಾಡಬೇಕು. 2028 ರ ಚುನಾವಣೆ ನಮ್ಮ ಮುಂದಿನ ಗುರಿ ಎಂದರು.

ನಾನು ಯಾವತ್ತೂ ಗುಂಪುಗಾರಿಕೆ ಮಾಡುವುದಿಲ್ಲ. ಎಲ್ಲರೂ ಗಮನಿಸಿರುವಂತೆ ನಾನು ದೆಹಲಿಗೆ ಹೋದರೆ ಒಬ್ಬನೇ ಹೋಗುತ್ತೇನೆ.

ನಾನು 8-10 ಶಾಸಕರನ್ನು ಜೊತೆಯಲ್ಲಿ ಕರೆದುಕೊಂಡು ಹೋಗಬಹುದಿತ್ತು. ಅದು ದೊಡ್ಡ ವಿಚಾರವಲ್ಲ. ನಾನು ಅಧ್ಯಕ್ಷ ಸ್ಥಾನದಲ್ಲಿ ಇರುವಾಗ ಎಲ್ಲರನ್ನೂ ಒಟ್ಟಾಗಿ ಕರೆದುಕೊಂಡು ಹೋಗಬೇಕು.

140 ಶಾಸಕರೂ ನಮ್ಮ ನಾಯಕರೇ. ಯಾರಿಗೂ ತಾರತಮ್ಯ ಮಾಡಲ್ಲ. ನಾನು ಕುಮಾರಸ್ವಾಮಿ ಅವರ ಜತೆಯಲ್ಲೇ ನಿಷ್ಠೆಯಿಂದ ಕೆಲಸ ಮಾಡಿದ್ದೇನೆ. ಇದನ್ನು ಕುಮಾರಸ್ವಾಮಿ ಅವರು ಒಪ್ಪದೇ ಇರಬಹುದು, ನನ್ನ ನಿಷ್ಠೆ, ನನ್ನ ಆತ್ಮಸಾಕ್ಷಿ ಆ ದೇವರಿಗೆ ಗೊತ್ತಿದೆ.

ಕುಮಾರಸ್ವಾಮಿ ಅವರ ಸರ್ಕಾರ ಉಳಿಸಲು ಕೊನೆ ದಿನದವರೆಗೂ ಎಷ್ಟು ಪ್ರಯತ್ನ ಮಾಡಿದ್ದೇನೆ ಎಂದು ಅವರ ತಂದೆಯವರಿಗೂ ಗೊತ್ತಿದೆ. ಅವರು ತಮ್ಮ ಆಸೆಗೆ ಏನಾದರೂ ಮಾತಾಡಿಕೊಳ್ಳಲಿ, ನಾನು ಬೇಸರ ಮಾಡಿಕೊಳ್ಳಲ್ಲ. ನಾನು ಎಂದಿಗೂ ಬೆನ್ನಿಗೆ ಚೂರಿ ಹಾಕಲ್ಲ. ನೇರವಾಗಿ ಹೋರಾಟ ಮಾಡುವವನು ಎಂದರು.

ಡಿ.ಕೆ.ಶಿವಕುಮಾರ್ ಸೂಪರ್ ಸಿಎಂ ಎಂಬ ಬಿಜೆಪಿ ಟೀಕೆ ಬಗ್ಗೆ ಪ್ರತಿಕ್ರಿಯಿಸಿ, ಬಿಜೆಪಿ ವಿರೋಧ ಪಕ್ಷವಾಗಿ ಏನಾದರೂ ಮಾತನಾಡಬೇಕಲ್ಲ, ಬದುಕಿದ್ದೇವೆ ಎಂದು ತೋರಿಸಲು ಮಾತನಾಡುತ್ತಾರೆ. ಬಿಜೆಯವರ ಬಗ್ಗೆ ತಲೆ ಕೆಡಿಸಿಕೊಳ್ಳಲು ಆಗುತ್ತದೆಯೇ? ಎಂದು ಪ್ರಶ್ನಿಸಿದರು.

ದೆಹಲಿ ಪ್ರವಾಸದ ಬಗ್ಗೆ ನಾನು ಮತ್ತು ಸಿಎಂ ಈಗ ಚರ್ಚೆ ಮಾಡಿದ್ದು, ಮುಂದೆಯೂ ಮಾತನಾಡುತ್ತೇವೆ. ನೀರಾವರಿ, ಮೆಕ್ಕೆಜೋಳ ಹಾಗೂ ಕಬ್ಬು ಬೆಳೆ ಬಗ್ಗೆ ಸಂಸತ್ತಿನಲ್ಲಿ ಧ್ವನಿ ಎತ್ತುವ ಬಗ್ಗೆ ಸಂಸದರ ಜೊತೆ ಚರ್ಚೆ ಮಾಡಬೇಕು.

ಸರ್ವಪಕ್ಷ ಸಭೆ ಕರೆಯಬೇಕಿದ್ದು, ಈ ಸಭೆಯಲ್ಲಿ ಎಲ್ಲಾ ಸಂಸದರು ಭಾಗವಹಿಸಬೇಕು. ಹೀಗಾಗಿ ಈ ಸಭೆಯನ್ನು ದೆಹಲಿಯಲ್ಲಿ ಮಾಡಬೇಕು ಎಂಬುದು ನನ್ನ ವೈಯಕ್ತಿಕ ಅಭಿಪ್ರಾಯ. ಸಿಎಂ ಏನು ಹೇಳುತ್ತಾರೆ ಕೇಳುತ್ತೇನೆ. ನಾನೊಬ್ಬನೇ ಹೋಗಿ ಎಲ್ಲರ ಸಭೆ ಮಾಡುವುದು ಸರಿಯಲ್ಲ. ಈ ಸಭೆಯಲ್ಲಿ ರಾಜ್ಯದ ಇತರ ಸಚಿವರೂ ಇರಬೇಕು ಎಂದರು.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!