ನವದೆಹಲಿ: ರಷ್ಯಾ ಅಧ್ಯಕ್ಷ ವ್ಲಾಡಿಮರ್ ಪುಟಿನ್ ನಾಳೆ ಭಾರತಕ್ಕೆ ಭೇಟಿ ನೀಡಲಿದ್ದಾರೆ. ಎರಡು ದಿನಗಳ ಭೇಟಿಗಾಗಿ ಅವರು ಭಾರತಕ್ಕೆ ಆಗಮಿಸಲಿದ್ದು, ನಾಳೆ, ನಾಡಿದ್ದು ಎರಡು ದಿನ ಪ್ರವಾಸ ನಿಗದಿಯಾಗಿದೆ.
23ನೇ ಭಾರತ -ರಷ್ಯಾ ವಾರ್ಷಿಕ ಶೃಂಗಸಭೆಯಲ್ಲಿ ಪುಟಿನ್ ಭಾಗವಹಿಸಲಿದ್ದಾರೆ.ಈ ವೇಳೆ ಪ್ರಧಾನಿ ಮೋದಿ ಅವರನ್ನು ಭೇಟಿಯಾಗಲಿದ್ದಾರೆ.
ಭೇಟಿಯ ವೇಳೆ ಉಭಯ ನಾಯಕರಿಂದ ಹಲವು ಮಹತ್ವದ ವಿಚಾರಗಳ ಬಗ್ಗೆ ಚರ್ಚೆ ನಡೆಯಲಿದೆ. ಚರ್ಚೆಯ ವೇಳೆ ಉಭಯ ದೇಶಗಳ ಸಂಬಂಧ ಸುಧಾರಣೆಯ ಬಗ್ಗೆ ಸಮಾಲೋಚನೆ ನಡೆಸಲಾಗುವುದು.
ಅದೇ ರೀತಿ ಎಸ್ -400, ಸುಖೊಯ್- 57 ಯುದ್ಧ ವಿಮಾನಗಳ ಖರೀದಿ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಉಭಯ ನಾಯಕರು ಚರ್ಚೆ ನಡೆಸಲಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ಪುಟಿನ್ ಅವರಿಗೆ ಔತಣಕೂಟ ಆಯೋಜನೆ ಮಾಡಲಾಗಿದೆ.




