ಮಲ್ಲಮ್ಮನ ಬೆಳವಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ. ಬಿ ಸಿ. ಟ್ರಸ್ಟ್ (ರಿ), ಬೈಲಹೊಂಗಲ ಇವರ ವತಿಯಿಂದ ಎಂ ಆರ್ ಪಾಟೀಲ್ ಸರ್ಕಾರಿ ಪ್ರೌಢ ಶಾಲೆ, ಬೆಳವಡಿಯಲ್ಲಿ ಎಸೆಸೆಲ್ಸಿ ಮಕ್ಕಳಿಗಾಗಿ 3 ತಿಂಗಳ ಉಚಿತ ಟ್ಯೂಷನ್ ತರಗತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಬೆಳಗಾವಿ 1 ಜಿಲ್ಲಾ ಜನಜಾಗೃತಿ ಸದಸ್ಯರಾದ ವಿಠ್ಠಲ್ ಪಿಸೆ, ಶಾಲೆಯ ಮುಖ್ಯೋಪಾಧ್ಯಾಯರು, ಶಾಲೆಯ sdmc ಸದಸ್ಯರು, ಶಾಲೆಯ ವಿದ್ಯಾರ್ಥಿಗಳ ಸಮ್ಮುಖದಲ್ಲಿ ಉದ್ಘಾಟನೆ ಮಾಡಿದರು.
ಕಾರ್ಯಕ್ರಮದ ಮುಖ್ಯ ಅತಿಥಿಯಾದ ಶ್ರೀ ವಿಠ್ಠಲ್ ಪಿಸೆ ಅವರು ವಿದ್ಯಾರ್ಥಿಗಳು ಯಾವುದೇ ಸಂದರ್ಭದಲ್ಲಿಯೂ ಎದೆಗುಂದದೆ ಕಠಿಣ ಪರಿಶ್ರಮದಿಂದ ಅಭ್ಯಾಸ ಮಾಡಿ ಮೇಲ್ದರ್ಜೆಯಲ್ಲಿ ಉತ್ತೀರ್ಣರಾಗಬೇಕೆಂದು ಸಲಹೆ ನೀಡಿದರು. ಕಾರ್ಯಕ್ರಮದಲ್ಲಿ ಭಾಗವಹಿಸಿದ ಬೆಳವಡಿ ವಲಯದ ಮೇಲ್ವಿಚಾರಕರಾದ ಶ್ರೀ ಕೆ ಟಿ ಸಂತೋಷ ಅವರು ಗ್ರಾಮಾಭಿವೃದ್ಧಿ ಸಂಸ್ಥೆಯ ಶಿಕ್ಷಣ ಬಲವರ್ಧನೆನಗಾಗಿ ಹಮ್ಮಿಕೊಂಡಿರುವ ಕಾರ್ಯಕ್ರಮಗಳನ್ನು ಸಂಪೂರ್ಣವಾಗಿ ಮಾಹಿತಿ ನೀಡಿದರು. ಕುಮಾರಿ ಲಕ್ಷ್ಮಿ ಕುರಿ ಪ್ರಾರ್ಥಿಸಿದರು ಶ್ರೀ ಕಾರ್ಯಕ್ರಮದಲ್ಲಿ ಎಸ್ ಡಿ ಎಮ್ ಸಿ ಅಧ್ಯಕ್ಷರಾದ ಶ್ರೀ ಈರಪ್ಪ ಮುರಾರಿ ಹಾಗೂ ಸದಸ್ಯರಾದ ಶ್ರೀ ಶಶಿಧರ ಪತ್ತಾರ ಅವರು ಉಪಸ್ಥಿತರಿದ್ದರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ, ಧರ್ಮಸ್ಥಳ ಗ್ರಾಮ ಅಭಿವೃದ್ಧಿ ಸಂಸ್ಥೆ ನೀಡುತ್ತಿರುವ ಈ ಶೈಕ್ಷಣಿಕ ಸವಲತ್ತನ್ನು ಬಳಸಿಕೊಂಡು ಮಕ್ಕಳು ಉತ್ತಮ ದರ್ಜೆಯಲ್ಲಿ ಪಾಸಾಗಿ ಸಂಸ್ಥೆಯ ಕೀರ್ತಿಯನ್ನು ಹೆಚ್ಚಿಸಲು ಸಲಹೆ ನೀಡಿದರು .ಎಂ ಡಿ ಬಾವಾಖಾನ ಕಾರ್ಯಕ್ರಮ ನಿರೂಪಿಸಿದರು. ಶ್ರೀ ಆರ್ ಎಸ್ ಹಾಲನ್ನವರ ವಂದಿಸಿದರು.ಕಾರ್ಯಕ್ರಮ ಯಶಸ್ವಿಗೊಳಿಸಲಾಯಿತು.
ವರದಿ : ದುಂಡಪ್ಪ ಹೂಲಿ




