ಬೆಂಗಳೂರು : ನಿನ್ನೆ ರಾತ್ರಿ ಮದುವೆಯೊಂದರಲ್ಲಿ ನಾನು ಹಾಗೂ ಸತೀಶ್ ಜಾರಕಿಹೊಳಿ ಭೇಟಿಯಾಗಿದ್ದು ನಿಜ. ರಾಜ್ಯ ಹಾಗೂ ಪಕ್ಷದ ವಿಚಾರ ಮಾತನಾಡಿದ್ದೇವೆ..
ನಾನು ಹಾಗೂ ಸತೀಶ್ ಜಾರಕಿಹೊಳಿ ಸಹೋದ್ಯೋಗಿಗಳು. ನಮ್ಮನ್ನು ವೈರಿಗಳಂತೆ ಯಾಕೆ ನೋಡುತ್ತೀರಿ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಪ್ರಶ್ನಿಸಿದ್ದಾರೆ.
ಕೆಐಎಡಿಬಿಎ ನೂತನ ಕಚೇರಿ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಗುರುವಾರ ಪ್ರತಿಕ್ರಿಯೆ ನೀಡಿದರು.
ಸತೀಶ್ ಜಾರಕಿಹೋಳಿ ಅವರ ಭೇಟಿ ಬಗ್ಗೆ ಕೇಳಿದಾಗ, “ನಾವು ಮಧ್ಯಾಹ್ನ ಸಚಿವ ಸಂಪುಟ ಸಭೆಯಲ್ಲಿ ಇರುತ್ತೇವೆ, ರಾತ್ರಿ ಊಟಕ್ಕೆ ಸೇರುತ್ತೇವೆ, ಬೆಳಗ್ಗೆ ತಿಂಡಿಗೆ ಸೇರುತ್ತೇವೆ. ಇವೆಲ್ಲ ಇದ್ದೇ ಇರುತ್ತವೆ. ರಾಜಕೀಯದಲ್ಲಿ ಸ್ನೇಹ, ಬಾಂಧವ್ಯ, ನೆಂಟಸ್ಥನ ಇದ್ದೇ ಇರುತ್ತದೆ” ಎಂದರು.
“




