ನವದೆಹಲಿ: ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು ಎಂದು ಕೇಂದ್ರ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು ಕೇಂದ್ರದ ಶಿಕ್ಷಣ ಮಂತ್ರಿ ಧರ್ಮೇಂದ್ರ ಪ್ರಧಾನ್ ಅವರಿಗೆ ಮನವಿ ಮಾಡಿದ್ದಾರೆ.
ಈ ಬಗ್ಗೆ ಸಚಿವ ಪ್ರಧಾನ್ ಅವರಿಗೆ ಪತ್ರ ಬರೆದಿರುವ ಕುಮಾರಸ್ವಾಮಿ ಅವರು; ಮೌಲ್ಯಾಧಾರಿತ ಶಿಕ್ಷಣಕ್ಕೆ ಬಲವಾದ ಒತ್ತು ನೀಡುವ ನಿಟ್ಟಿನಲ್ಲಿ ಭಗವದ್ಗೀತೆ ಬೋಧನೆ ಅತ್ಯಗತ್ಯವಾಗಿದೆ ಎಂದು ಸಚಿವರು ಹೇಳಿದ್ದಾರೆ.




