Ad imageAd image

ಇಂದು ಹಾಸನದಲ್ಲಿ ಸರ್ಕಾರಿ ಸೇವೆಗಳ ಸಮರ್ಪಣಾ ಸಮಾವೇಶ

Bharath Vaibhav
ಇಂದು ಹಾಸನದಲ್ಲಿ ಸರ್ಕಾರಿ ಸೇವೆಗಳ ಸಮರ್ಪಣಾ ಸಮಾವೇಶ
WhatsApp Group Join Now
Telegram Group Join Now

ಹಾಸನ: ಹಾಸನ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯಿತಿ ವತಿಯಿಂದ ಇಂದು ನಗರದ ಸರ್ಕಾರಿ ಇಂಜಿನಿಯರಿಂಗ್ ಕಾಲೇಜು ಆವರಣದಲ್ಲಿ ಆಯೋಜಿಸಿರುವ ಸರ್ಕಾರಿ ಸೇವೆಗಳ ಸಮರ್ಪಣಾ ಸಮಾವೇಶ ಆಯೋಜಿಸಲಾಗಿದೆ.

50 ಸಾವಿರ ಕ್ಕೂ ಹೆಚ್ಚು ಕುಟುಂಬಗಳ ಸಂಭ್ರಮದ ಕ್ಷಣ ಇದಾಗಿದ್ದು, ಕಂದಾಯ ಇಲಾಖೆ ದರಖಾಸ್ತು ಪೋಡಿ, ಪೌತಿಖಾತೆ, ಕಂದಾಯ ಗ್ರಾಮ 94 ಸಿ ಹಕ್ಕು ಪತ್ರಗಳ ವಿತರಣೆ ಮತ್ತು ವಿವಿಧ ಇಲಾಖೆಗಳ ಫಲಾನುಭವಿಗಳಿಗೆ ಸವಲತ್ತು ಸಮರ್ಪಣೆ ನಡೆಯಲಿದೆ.

ಹಾಸನದಲ್ಲಿ ಸರ್ಕಾರದ ಸೇವೆಗಳ ಸಮರ್ಪಣಾ ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಕಂದಾಯ ಸಚಿವ ಕೃಷ್ಣ ಬೈರೇಗೌಡ ಸೇರಿದಂತೆ ಹಲವು ನಾಯಕರು ಹಾಸನದಲ್ಲಿ ನಡೆಯುವ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ.

ಒಂದೇ ಹೆಲಿಕಾಪ್ಟರ್ ನಲ್ಲಿ ಸಿಎಂ, ಡಿಸಿಎಂ ಆಗಮಿಸಲಿದ್ದಾರೆ. 70,000 ಫಲಾನುಭವಿಗಳು ಭಾಗವಹಿಸಲಿದ್ದು, ಫಲಾನುಭವಿಗಳಿಗೆ ಸವಲತ್ತು ಸಮರ್ಪಣೆ ಕಾರ್ಯಕ್ರಮ ನಡೆಯಲಿದೆ.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!