Ad imageAd image

ಕೃಷ್ಣತತ್ವ ನಂಬಿದವನೇ ಹೊರತು ಕಂಸ ಹಿಂಸೆಯನ್ನಲ್ಲ: ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ 

Bharath Vaibhav
ಕೃಷ್ಣತತ್ವ ನಂಬಿದವನೇ ಹೊರತು ಕಂಸ ಹಿಂಸೆಯನ್ನಲ್ಲ: ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ 
HDK
WhatsApp Group Join Now
Telegram Group Join Now

ನವದೆಹಲಿ: ಭಗವದ್ಗೀತೆಯನ್ನು ಶಾಲಾ ಮಕ್ಕಳಿಗೆ ಬೋಧಿಸಬೇಕು ಎಂದು ಪುನರುಚ್ಚರಿಸಿರುವ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ, ತಮ್ಮನ್ನು ಮನುವಾದಿ ಎಂದು ಕರೆದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸೈದ್ಧಾಂತಿಕ ಅಧಃಪತನ ಎಂದ ಸಚಿವ ಹೆಚ್.ಸಿ. ಮಹದೇವಪ್ಪನವರಿಗೆ ತಿರುಗೇಟು ನೀಡಿದ್ದಾರೆ.

ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಕೇಂದ್ರ ಸಚಿವ ಕುಮಾರಸ್ವಾಮಿ, ನಾನು ಕೃಷ್ಣತತ್ವ ನಂಬಿದವನೇ ಹೊರತು ಕಂಸ ಹಿಂಸೆಯನ್ನಲ್ಲ. ಕಾಂಗ್ರೆಸ್‌ ಕಂಸನಲ್ಲಿ ನಂಬಿಕೆ ಇಟ್ಟಿದೆ! ನನ್ನನ್ನು ಮನುವಾದಿ ಎಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಸೈದ್ಧಾಂತಿಕ ಅಧಃಪತನ ಎಂದು ತಾಳ ಹಾಕಿದ ಸಚಿವ ಮಹದೇವಪ್ಪ ಇವರಿಬ್ಬರೂ ಶಾಲಾ ಮಕ್ಕಳಿಗೇನು ಬೋಧಿಸುತ್ತಾರೆ ಎಂಬುದನ್ನು ಹೇಳಿಲಿ. ಬುದ್ಧಿಗೇಡಿತನಕ್ಕೂ ಮಿತಿ ಬೇಡವೇ? ಎಂದು ಗುಡುಗಿದ್ದಾರೆ.

ಭಗವದ್ಗೀತೆ ಜಗದ ಬೆಳಕು, ಅರಿವು. ಸನ್ಮಾರ್ಗದ ದೀವಿಗೆ. ಆದರ್ಶಗಳ ಮಹಾಸಾರ. ಮಕ್ಕಳನ್ನು ಬಾಲ್ಯದಿಂದಲೇ ಒಳ್ಳೇ ಮಾರ್ಗದಲ್ಲಿ ನಡೆಸುವ ಸುದುದ್ದೇಶದಿಂದ ನಾನು ಕೇಂದ್ರದ ಶಿಕ್ಷಣ ಸಚಿವರಾದ ಧರ್ಮೇಂದ್ರ ಪ್ರಧಾನ್‌ ಅವರಿಗೆ ಪತ್ರ ಬರೆದು ಪಠ್ಯದಲ್ಲಿ ಭಗವದ್ಗೀತೆ ಸೇರಿಸಬೇಕು ಎಂದು ವಿನಂತಿಸಿದ್ದೇನೆ.

ಬಹುಶಃ ಮಹದೇವಪ್ಪನವರಿಗೆ ಭಗವದ್ಗೀತೆಯ ಸಾರ ಗೊತ್ತಿಲ್ಲ. ಅವರಿಗೆ ಇನ್ನಾವುದೋ ಗ್ರಂಥದ ಸಾರ ಗಾಢವಾಗಿ ಇಳಿದಿರಬೇಕು!? ಎಂದು ಟಾಂಗ್ ನೀಡಿದ್ದಾರೆ.

ನಾನೂ ಸೇರಿ ಜನಪ್ರತಿನಿಧಿಗಳೆಲ್ಲರೂ ಪ್ರಮಾಣ ಸ್ವೀಕರಿಸುವುದು ಸಂವಿಧಾನಬದ್ಧವಾಗಿಯೇ. ದೇವರು, ತಂದೆ ತಾಯಿ ಹೆಸರಿನಲ್ಲಿ ಪ್ರಮಾಣ ಸ್ವೀಕರಿಸುತ್ತೇವೆ. ಇದು ಕೂಡ ಸನ್ಮಾರ್ಗವೇ. ಹಾಗಾದರೆ ಮಹದೇವಪ್ಪನವರ ‘ಮಾರ್ಗ’ ಯಾವುದು? ಕಂಸ ಮಾರ್ಗವೇ!!?? ಎಂದು ಕೇಂದ್ರ ಸಚಿವರು ಪ್ರಶ್ನಿಸಿದ್ದಾರೆ.

ಮಹದೇವಪ್ಪನವರೇ.. ನಿಮಗೆ ತಿಳಿದಿರಲಿ. ಇವತ್ತು ಭಾರತದ ರಾಜನೀತಿ ನಿಂತಿರುವುದೇ ಕೃಷ್ಣತತ್ತ್ವದ ಮೇಲೆ. ಸಮರ, ರಾಜಕೀಯ, ಜ್ಞಾನ, ಆಡಳಿತ, ಮನುಷ್ಯ ಸಂಬಂಧಗಳು ಎಲ್ಲಕ್ಕೂ ಭಗವದ್ಗೀತೆಯೇ ದೀವಿಗೆ. ಕೃಷ್ಣಬೋಧೆ ಸಾರ್ವಕಾಲಿಕ, ಭಗವದ್ಗೀತೆ ಕಾಲಾತೀತ. ನಿಮ್ಮನ್ನು ಅಜ್ಞಾನಿ ಎನ್ನುವುದು ನನಗೆ ಇಷ್ಟವಿಲ್ಲ. ಸಂವಿಧಾನ, ಪ್ರಜಾಪ್ರಭುತ್ವ ಎಂದು ಸದಾ ಜಪಿಸುವ ನೀವು, ಭಗವದ್ಗೀತೆಯ ಜತೆಗೆ ರಾಮಾಯಣ, ಮಹಾಭಾರತವನ್ನೂ ಓದಿ. ಇದು ನನ್ನ ಸಲಹೆಯಷ್ಟೇ. ಭಗವದ್ಗೀತೆ ಓದಬೇಡಿ ಎಂದು ನಾನೆಂದೂ ಹೇಳಿಲ್ಲ. ಹೇಳುವುದೂ ಇಲ್ಲ ಎಂದು೦ ಕುಮಾರಸ್ವಾಮಿ ತಿಳಿಸಿದ್ದಾರೆ.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!