ಧಾರವಾಡ : ‘ದಂಪತಿ ಒಂದು ಅಥವಾ ಎರಡು ಮಕ್ಕಳು ಮಾಡಿಕೊಳ್ಳಬೇಕು. ಜನಸಂಖ್ಯೆ ನಿಯಂತ್ರಣ ಮಾಡಬೇಕು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ನವಲಗುಂದ ಪಟ್ಟಣದ ಮಾಡೆಲ್ ಹೈಸ್ಕೂಲ್ ಆವರಣದಲ್ಲಿ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಮಾತನಾಡಿದರು. ‘ದೇಶದ ಜನಸಂಖ್ಯೆ ಹೆಚ್ಚಾಗಿದೆ ‘ಜನಸಂಖ್ಯೆಯಲ್ಲಿ ಭಾರತವು ಚೀನಾವನ್ನು ಹಿಂದಿಕ್ಕಿದೆ’ ಎಂದರು.
‘ಅಂತರ್ಜಾತಿ ವಿವಾಹಗಳು ಹೆಚ್ಚಾಗಬೇಕು. ಜಾತಿ, ವರ್ಗ ಪದ್ಧತಿ, ಅಸ್ಪೃಶ್ಯತೆ ಇವೆಲ್ಲವೂ ನಿರ್ಮೂಲನೆಯಾಗಬೇಕು ಎಂದು ಹೇಳಿದರು.




