ಪಣಜಿ : ಅಗ್ನಿ ದುರಂತದಲ್ಲಿ 25 ಮಂದಿ ಬಲಿ ತೆಗೆದುಕೊಂಡ ಬೆನ್ನಲ್ಲೇ ‘ನೈಟ್ ಕ್ಲಬ್’ ಕಟ್ಟಡ ಧ್ವಂಸಗೊಳಿಸಲು ಗೋವಾ ಸಿಎಂ ಪ್ರಮೋದ್ ಸಾವಂತ್ ಆದೇಶ ಹೊರಡಿಸಿದ್ದಾರೆ. ಕೆಲವೇ ಕ್ಷಣದಲ್ಲಿ ಕಟ್ಟಡ ಧ್ವಂಸಗೊಳ್ಳುವ ಸಾಧ್ಯತೆಯಿದೆ.
ಗೋವಾದ ನೈಟ್ ಕ್ಲಬ್ ನಲ್ಲಿ ಸಂಭವಿಸಿದ ಬೆಂಕಿ ದುರಂತದಲ್ಲಿ 25 ಜನರು ಸಾವನ್ನಪ್ಪಿದ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ತನಿಖೆಗೆ ಆದೇಶ ನೀಡಿತ್ತು.
ಉತ್ತರ ಗೋವಾದ ಅರ್ಪೋರಾದ ರೋಮಿಯೋ ಲೇನ್ ನೈಟ್ ಕ್ಲಬ್ ನಲ್ಲಿ ಬೆಂಕಿ ದುರಂತ ಸಂಭವಿಸಿ 14 ಜನ ಸಿಬ್ಬಂದಿ, ನಾಲ್ವರು ಪ್ರವಾಸಿಗರು ಸೇರಿ 25 ಜನರು ಸಾವನ್ನಪ್ಪಿದ್ದರು.
ಹಲವರು ಗಾಯಗೊಂಡಿದ್ದರು. ಘಟನೆಗೆ ಸಂಬಂಧಿಸಿದಂತೆ ಗೋವಾ ಪೊಲೀಸರು ನೈಟ್ ಕ್ಲಬ್ ಮಾಲೀಕ ಹಾಗೂ ಮ್ಯಾನೇಜರ್ ನನ್ನು ಬಂಧಿಸಿದ್ದಾರೆ.
ಗೋವಾ ಸಿಎಂ ಪ್ರಮೋದ್ ಸಾವಂತ್, ಗೋವಾ ನೈಟ್ ಕ್ಲಬ್ ನಲ್ಲಿ ಬೆಂಕಿ ದುರಂತ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಆದೇಶ ನೀಡಿದ್ದರು.
ಅರ್ಪೋರಾ ಪ್ರದೇಶದ ನೈಟ್ ಕ್ಲಬ್ ನಲ್ಲಿ ತಡರಾತ್ರಿ ಸಿಲಿಂಡರ್ ಸ್ಫೋಟಗೊಂಡು ಸಂಭವಿಸಿದ ಬೆಂಕಿ ದುರಂತದಲ್ಲಿ 14 ಜನ ಸಿಬ್ಬಂದಿ , ನಾಲ್ವರು ಪ್ರವಾಸಿಗರು ಸೇರಿದಂತೆ ಒಟ್ಟು 25 ಜನರು ಸಾವನ್ನಪ್ಪಿದ್ದರು. ಹಲವರು ಗಾಯಗೊಂಡಿದ್ದರು.




