Ad imageAd image

ಶ್ರೀಮಂತ ಮಹಿಳೆಯರಿಗೇಕೆ ಪುಕ್ಸಟೆ ಬಸ್ : ಸಿಎಂ – ಡಿಸಿಎಂ ಕಾಂಗ್ರೆಸ್ ಶಾಸಕರ ತೀವ್ರ ವಿರೋಧ 

Bharath Vaibhav
ಶ್ರೀಮಂತ ಮಹಿಳೆಯರಿಗೇಕೆ ಪುಕ್ಸಟೆ ಬಸ್ : ಸಿಎಂ – ಡಿಸಿಎಂ ಕಾಂಗ್ರೆಸ್ ಶಾಸಕರ ತೀವ್ರ ವಿರೋಧ 
WhatsApp Group Join Now
Telegram Group Join Now

ಬೆಳಗಾವಿ : ರಾಜ್ಯ ಸರ್ಕಾರದ ಶಕ್ತಿ ಸ್ಕೀಮ್ ಬಗ್ಗೆ ಅನೇಕ ಜನರಿಗೆ ಅಸಮಾಧಾನ ಇದೆ. ಸದ್ಯ ಇದೇ ವಿಚಾರ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲೂ ಪ್ರತಿಧ್ವನಿಸಿದೆ.

ಬೆಳಗಾವಿಯಲ್ಲಿ ಮಂಗಳವಾರ ರಾತ್ರಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ, ಕರ್ನಾಟಕದ ಕಾಂಗ್ರೆಸ್ ಶಾಸಕರು ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಗ್ಯಾರಂಟಿ ಯೋಜನೆಗಳ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಮುಂದಿನ ಚುನಾವಣೆಗಳನ್ನು ಕೇವಲ ಗ್ಯಾರಂಟಿಗಳನ್ನು ನೆಚ್ಚಿಕೊಂಡು ಎದುರಿಸಲು ಸಾಧ್ಯವಿಲ್ಲ, ಬದಲಿಗೆ ಅಭಿವೃದ್ಧಿ ಯೋಜನೆಗಳತ್ತ ಗಮನ ಹರಿಸುವ ಅಗತ್ಯವಿದೆ ಎಂದು ಶಾಸಕರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಸಮ್ಮುಖದಲ್ಲಿಯೇ ತಿಳಿಸಿದ್ದಾರೆ.

ಕಾಂಗ್ರೆಸ್ ಗ್ಯಾರಂಟಿಗಳ ಬಗ್ಗೆಯೇ ಹೆಚ್ಚಿನ ಶಾಸಕರು ಅಸಮಾಧಾನ ಹೊರಹಾಕಿದ್ದು, ಅದರಲ್ಲೂ ಪ್ರಮುಖವಾಗಿ ಸದಾಶಿವನಗರದಂತಹ ಶ್ರೀಮಂತ ಪ್ರದೇಶದಲ್ಲಿರುವ ಮನೆಗಳಿಗೂ 200 ಯೂನಿಟ್ ವಿದ್ಯುತ್ ಉಚಿತ, ಲಕ್ಷಾಂತರ ರೂಪಾಯಿ ದುಡಿಯುವ ಮಹಿಳೆಯರಿಗೂ ಬಸ್ ಪ್ರಯಾಣ ಉಚಿತ ನೀಡಬೇಕಾ ಎಂದು ಅನೇಕ ಶಾಸಕರು ಪ್ರಶ್ನಿಸಿದ್ದಾರೆ.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!