ಬೆಳಗಾವಿ : ರಾಜ್ಯದ ವಿವಿಧ ಇಲಾಖೆಗಳಲ್ಲಿ ಹಂತ ಹಂತವಾಗಿ 1,88,037 ನ್ನು ಭರ್ತಿ ಮಾಡಲಾಗುವುದು, ಆರ್ಥಿಕ ಇಲಾಖೆ 24,300 ಹುದ್ದೆಗಳ ಭರ್ತಿಗೆ ಅನುಮೋದನೆ ದೊರಕಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ವಿಧಾನ ಪರಿಷತ್ ನಲ್ಲಿ ಮಾತನಾಡಿದ ಸಿಎಂ ಸಿದರಾಮಯ್ಯ, ಸರ್ಕಾರದ ವಿವಿಧ ಇಲಾಖೆಗಳಲ್ಲಿ ಒಟ್ಟು 2,84,881 ಹುದ್ದೆಗಳು ಖಾಲಿಯಿದೆ.
ಅದರಲ್ಲಿ ವಿವಿಧ ನಿಗಮ ಮಂಡಳಿಗಳಲ್ಲಿ1,01,420 ಹುದ್ದೆಗಳು, ವಿಶ್ವವಿದ್ಯಾಲಯಗಳಲ್ಲಿ 14,677 ಹುದ್ದೆಗಳು ಒಟ್ಟು 1,88,037 ಹುದ್ದೆಗಳು ಖಾಲಿಯಿದೆ. ಈಗಾಗಲೇ 24,300 ಹುದ್ದೆಗಳ ನೇಮಕಾತಿ ಪ್ರಕ್ರಿಯೆಗೆ ಆರ್ಥಿಕ ಇಲಾಖೆಯಿಂದ ಅನುಮತಿ ದೊರೆತಿದೆ.
ಹೈದ್ರಾಬಾದ್ ಕರ್ನಾಟಕಕ್ಕೆ 371ಜೆ ಅಡಿ 32,132 ಹುದ್ದೆಗಳು ಭರ್ತಿಯಾಗಬೇಕಿದೆ. ಒಟ್ಟು 56,432 ಹುದ್ದೆಗಳ ಭರ್ತಿಗೆ ಈಗಾಗಲೇ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ.
ಒಳಮೀಸಲಾತಿಯ ಬಿಕ್ಕಟ್ಟಿನಿಂದಾಗಿ ನೇಮಕಾತಿ ಪ್ರಕ್ರಿಯೆಯಲ್ಲಿ ವಿಳಂಬವುಂಟಾಗಿತ್ತು. ಈಗ ಈ ಸಮಸ್ಯೆ ಬಗೆಹರಿದಿದ್ದು, ಆರ್ಥಿಕ ಇಲಾಖೆಯ ಅನುಮತಿ ಪಡೆದು ಹಂತ ಹಂತವಾಗಿ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದರು.




