ಬೆಳಗಾವಿ: ತಾಲೂಕಿನ ಬೆಳಗುಂದಿ ಗ್ರಾಮದ ಪ್ರೌಢಶಾಲೆಯ ಪ್ರಾಂಶುಪಾಲ, ವಿದ್ಯಾರ್ಥಿನಿಯರೊಂದಿಗೆ ಅಸಭ್ಯವಾಗಿ ವರ್ತಿಸಿದ ಆರೋಪದ ಮೇಲೆ ಪೋಷಕರು ಮತ್ತು ಸ್ಥಳೀಯರಿಂದ ಧರ್ಮದೇಟು ತಿಂದಿದ್ದಾನೆ. ಘಟನೆಯ ನಂತರ, ಪೊಲೀಸರು ಆರೋಪಿ ಪ್ರಾಂಶುಪಾಲನನ್ನು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ.
ಶಾಲಾ ವಿದ್ಯಾರ್ಥಿನಿಯರ ಜೊತೆ ಅಸಭ್ಯವಾಗಿ ವರ್ತಿಸಿದ ಆರೋಪದ ಮೇಲೆ ಪ್ರೌಢ ಶಾಲೆಯ ಪ್ರಾಂಶುಪಾಲನಿಗೆ ಸ್ಥಳೀಯರು ಮತ್ತು ಪೋಷಕರು ಧರ್ಮದೇಟು ನೀಡಿರುವ ಘಟನೆ ಬೆಳಗಾವಿ ತಾಲೂಕಿನ ಬೆಳಗುಂದಿ ಗ್ರಾಮದ ಹೆಣ್ಣು ಮಕ್ಕಳ ಹೈಸ್ಕೂಲ್‌ನಲ್ಲಿ ನಡೆದಿದೆ. ಈ ಘಟನೆ ಗ್ರಾಮದಲ್ಲಿ ತೀವ್ರ ಆಕ್ರೋಶ ಮತ್ತು ಸಂಚಲನ ಮೂಡಿಸಿದೆ.




