Ad imageAd image

ನಾನು ಯಾವುದೇ ಬಲ ಪ್ರದರ್ಶನ ಮಾಡುತ್ತಿಲ್ಲ : ಡಿ. ಕೆ ಶಿವಕುಮಾರ್ 

Bharath Vaibhav
ನಾನು ಯಾವುದೇ ಬಲ ಪ್ರದರ್ಶನ ಮಾಡುತ್ತಿಲ್ಲ : ಡಿ. ಕೆ ಶಿವಕುಮಾರ್ 
DKS
WhatsApp Group Join Now
Telegram Group Join Now

ಬೆಳಗಾವಿ: ನಾನು ಯಾವುದೇ ಬಲ ಪ್ರದರ್ಶನ ಮಾಡುತ್ತಿಲ್ಲ, ಅದರ ಅವಶ್ಯಕತೆಯೂ ನನಗಿಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಮಾತನಾಡಿದ ಡಿಸಿಎಂ, ಡಿನ್ನರ್ ಮೀಟಿಂಗ್ ಮೂಲಕ ಬಲ ಪ್ರದರ್ಶನದ ಅಗತ್ಯ ನನಗಿಲ್ಲ. ನನ್ನ ಹಿಂದೆ ಯಾರೂ ಬರುವುದು ಬೇಡ, ನನ್ನ ಪರವಾಗಿ ಯಾರು ಮಾತನಾಡುವುದೂ ಬೇಡ.

ನಾನು ಸಿಎಂ ಸೇರಿದಂತೆ 140 ಶಾಸಕರದೂ ಒಂದೇ ಗುಂಪು. ಅದು ಕಾಂಗ್ರೆಸ್ ಗುಂಪು. ಯಾವುದೇ ಗುಂಪುಗಾರಿಕೆಗೆ ಅವಕಾಶ ಮಾಡಿಕೊಡಬೇಡಿ ಎಂದು ಹೇಳಿದರು.

ನಾನು ಯಾವುದೇ ಡಿನ್ನರ್ ಮೀಟಿಂಗ್ ಮಾಡಿಲ್ಲ. ದೊಡ್ಡಣ್ಣನವರ ಬೆಳಗಾವಿ ಜಿಲ್ಲಾ ಕಾಂಗ್ರೆಸ್ ನ ಮಾಜಿ ಅಧ್ಯಕ್ಷರು. ನನ್ನ ಸ್ನೇಹಿತರೂ ಹೌದು. ಅವರದು ದೊಡ್ಡ ಕುಟುಂಬ. ಕಳೆದ 15 ವರ್ಷಗಳಿಂದ ನಮ್ಮ ಮನೆಗೆ ಊಟಕ್ಕೆ ಬನ್ನಿ ಎಂದು ಕರೆಯುತ್ತಿದ್ದರು.

ನಮ್ಮ ಕಾಂಗ್ರೆಸ್ ಕುಟುಂಬದವರನ್ನು ಮರೆಯಲು ಆಗುತ್ತದೆಯೇ? ಹೀಗಾಗಿ ನಾನೂ ಸೇರಿದಂತೆ ಒಂದಷ್ಟು ಜನರು ಊಟಕ್ಕೆ ಹೋಗಿದ್ದೆವು, ಅಷ್ಟೇ. ಅವರಿಗೆ ಗೌರವ ನೀಡುವ ಉದ್ದೇಶದಿಂದ ಅವರ ಮನೆಗೆ ಹೋಗಿದ್ದೆ. ಇದರ ಹೊರತಾಗಿ ಬೇರೇನೂ ಇಲ್ಲ ಎಂದು ತಿಳಿಸಿದರು.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!