Ad imageAd image

ರಾಜ್ಯದಲ್ಲಿ ಮೈ ಕೊರೆಯುವ ಚಳಿ : 3 ದಿನ ಶೀತಗಾಳಿ ಎಚ್ಚರಿಕೆ

Bharath Vaibhav
ರಾಜ್ಯದಲ್ಲಿ ಮೈ ಕೊರೆಯುವ ಚಳಿ : 3 ದಿನ ಶೀತಗಾಳಿ ಎಚ್ಚರಿಕೆ
WhatsApp Group Join Now
Telegram Group Join Now

ಬೆಂಗಳೂರು : ನಗರದಲ್ಲಿ ಮೈ ಕೊರೆಯುವ ಚಳಿ ಮುಂದುವರಿದಿದ್ದು, ಜನ ಜೀವನದ ಮೇಲೆ ಪರಿಣಾಮ ಬೀರಿದೆ.

ಕನಿಷ್ಠ ತಾಪಮಾನವು 14 ರಿಂದ 15 ಡಿಗ್ರಿ ಸೆಲ್ಸಿಯಸ್‌ಗೆ ಕುಸಿದಿದೆ. ವಿಶೇಷವಾಗಿ ಹೆಚ್‌ಎಎಲ್ ವ್ಯಾಪ್ತಿಯಲ್ಲಿ ನಿನ್ನೆ 13 ಡಿಗ್ರಿ ಸೆಲ್ಸಿಯಸ್ ಕನಿಷ್ಠ ತಾಪಮಾನ ದಾಖಲಾಗಿದೆ.

ಚಳಿ ಹಾಗೂ ಶೀತಗಾಳಿಯಿಂದಾಗಿ ಬೆಳಗ್ಗೆ ವಾಕಿಂಗ್‌ಗೆ ಹೋಗಲು ಸಹ ಜನರು ಹಿಂದೇಟು ಹಾಕುತ್ತಿದ್ದಾರೆ. ಡಿಸೆಂಬರ್ 15,16 ಮತ್ತು 17 ರಂದು ರಾಜ್ಯಾದ್ಯಂತ ಇದೇ ರೀತಿಯ ಚಳಿ ಮುಂದುವರೆಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಉತ್ತರ ಕರ್ನಾಟಕದ ಬೀದರ್, ಕಲಬುರಗಿ, ಯಾದಗಿರಿ, ವಿಜಯಪುರ, ಬಾಗಲಕೋಟೆ, ಕೊಪ್ಪಳ, ಬೆಳಗಾವಿ, ಧಾರವಾಡ, ಹಾವೇರಿ ಹಾಗೂ ಗದಗ ಜಿಲ್ಲೆಗಳಲ್ಲಿ ಕನಿಷ್ಠ ತಾಪಮಾನ 9 ರಿಂದ 11 ಡಿಗ್ರಿ ಸೆಂಟಿಗ್ರೇಡ್ ತಲುಪುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಹೆಚ್ಚಿನ ಜಿಲ್ಲೆಗಳಲ್ಲಿ ಕನಿಷ್ಠ ತಾಪಮಾನ ಸುಮಾರು 12 ಡಿಗ್ರಿ ಸೆಲ್ಸಿಯಸ್ ಆಸುಪಾಸಿನಲ್ಲಿ ಇರಲಿದೆ.

ಮುಂದಿನ ಎರಡು ದಿನಗಳಲ್ಲಿ ಇನ್ನೂ ಹೆಚ್ಚಿನ ಚಳಿ ಹಾಗೂ ಶೀತಗಾಳಿ ಇರಲಿದೆ. ಇದು ವಯಸ್ಸಾದವರ ಮೇಲೆ ತೀವ್ರ ಪರಿಣಾಮ ಬೀರಲಿದೆ. ಇದರ ಜೊತೆಗೆ ಬೆಳೆ ವೈಪರಿತ್ಯವೂ ಉಂಟಾಗಲಿದೆ ಎಂದ ಹವಾಮಾನ ಇಲಾಖೆ ತಿಳಿಸಿದೆ.

ಈ ಶೀತಗಾಳಿಯಿಂದ ಮನುಷ್ಯರು ತಮ್ಮನ್ನು ರಕ್ಷಿಸಿಕೊಳ್ಳಬೇಕು. ಬೆಚ್ಚಗಿನ ನೀರು, ಆಹಾರವನ್ನೇ ಸೇವಿಸಬೇಕು. ಇದರ ಜೊತೆಗೆ ಬೆಳೆಗಳನ್ನು ಸಂರಕ್ಷಿಸಲು ಹವಾಮಾನ ತಜ್ಞರು ಕೆಲವೊಂದಿಷ್ಟು ಸೂಚನೆಗಳನ್ನು ನೀಡಿದ್ದಾರೆ.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!