ದಕ್ಷಿಣ ಕನ್ನಡ : ಅಪ್ರಾಪ್ತ ಬಾಲಕಿ ಮೇಲೆ ಸೋದರನಿಂದಲೇ ಅತ್ಯಾಚಾರ ನಡೆದಿದೆ. ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ದೂರು ದಾಖಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಕುಳಾಯಿಯಲ್ಲಿ ತನ್ನ ದೊಡ್ಡಪ್ಪನ ಮಗಳಾದ ಅಪ್ರಾಪ್ತ ಬಾಲಕಿಯನ್ನು ಬೆದರಿಸಿ ಆರೋಪಿ ಅತ್ಯಾಚಾರ ಎಸಗಿದ್ದಾನೆ.ಬಾಗಲಕೋಟೆ ಜಿಲ್ಲೆ ಬಾದಾಮಿಯ ಯುವಕ ಆರೋಪಿಯಾಗಿದ್ದಾನೆ.
ಸಂತ್ರಸ್ತೆ ಮತ್ತು ಆರೋಪಿ ಕುಟುಂಬಗಳು ಕೂಡ ಒಂದೇ ಮನೆಯಲ್ಲಿ ವಾಸವಾಗಿದ್ದು, ಬಾಲಕಿ ನಿರಾಕರಿಸಿದರೂ ಆಕೆಯನ್ನು ಬೆದರಿಸಿ ಮನೆಯಲ್ಲಿ ಯಾರೂ ಇಲ್ಲದ ವೇಳೆ ಅತ್ಯಾಚಾರ ಎಸಗಿದ್ದಾನೆ.
ಮನೆಯಲ್ಲಿ ಯಾರಿಗಾದರೂ ವಿಷಯ ತಿಳಿಸಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ. ಈ ಕುರಿತಾಗಿ ಸಂತ್ರಸ್ತೆಯ ತಾಯಿ ಸುರತ್ಕಲ್ ಪೋಲಿಸ್ ಠಾಣೆಗೆ ದೂರು ನೀಡಿದ್ದಾರೆ. ಸುರತ್ಕಲ್ ಠಾಣೆಯಲ್ಲಿ ಪೋಕ್ಸೊ ಮತ್ತು ಭಾರತೀಯ ನ್ಯಾಯ ಸಂಹಿತೆ ಕಾಯ್ದೆಗಳಡಿ ಪ್ರಕರಣ ದಾಖಲಿಸಲಾಗಿದೆ.




