ಬೆಂಗಳೂರು: ಕಳೆದ ನಿನ್ನೆಯಿಂದ ರಾಜ್ಯದ ಹಲವು ಜಿಲ್ಲಾಧಿಕಾರಿಗಳ ಕಚೇರಿಗೆ ಬಾಂಬ್ ಬೆದರಿಕೆ ಇ-ಮೇಲ್ ಕಳುಹಿಸಲಾಗಿದೆ. ತುಮಕೂರು, ದಾವಣಗೆರೆ ಸೇರಿದಂತೆ ವಿವಿಧ ಜಿಲ್ಲೆಗಳ ಜಿಲ್ಲಾಧಿಕಾರಿ ಕಚೇರಿಗಳಿಗೆ ಬಾಂಬ್ ಬೆದರಿಕೆ ಇ-ಮೇಲ್ ಕಳುಹಿಸಲಾಗಿದೆ.
ಪಾಕಿಸ್ತಾನ ಐಎಸ್‌ಐ ಬ್ರ್ಯಾಂಚ್ ಇನ್ ತಮಿಳುನಾಡು ಹೆಸರಿನಲ್ಲಿ ಈ ಬಾಂಬ್ ಬೆದರಿಕೆ ಇ-ಮೇಲ್ ಕಳುಹಿಸಲಾಗಿದೆ.
ದಾವಣಗೆರೆ ಡಿಸಿ ಕಚೇರಿ ಸ್ಪೋಟಿಸುವುದಾಗಿ ಬೆದರಿಕೆ ಇ-ಮೇಲ್ ಮಾಡಲಾಗಿದೆ. ಕೆಲ ದಿನಗಳಲ್ಲಿ ಡಿಸಿ ಕಚೇರಿ ಸ್ಪೋಟಿಸುವುದಾಗಿ ಬೆದರಿಕೆ ಹಾಕಲಾಗಿದೆ.
ವಿಜಯಪುರ ಡಿಸಿ ಕಚೇರಿ ಸ್ಪೋಟಿಸುವುದಾಗಿ ಬೆದರಿಕೆ ಇ-ಮೇಲ್ ಮಾಡಲಾಗಿದೆ. ಹೀಗಾಗಿ ಸ್ಥಳಕ್ಕೆ ಶ್ವಾನ ದಳ, ಬಾಂಬ್ ಪತ್ತೆ ದಳವು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದೆ. ತುಮಕೂರು ಡಿಸಿ ಕಚೇರಿ ಸ್ಪೋಟಿಸುವುದಾಗಿಯೂ ಬೆಳಗ್ಗೆ 7ಕ್ಕೆ ಬಾಂಬ್ ಬೆದರಿಕೆ ಇ-ಮೇಲ್ ಕಳುಹಿಸಲಾಗಿತ್ತು.
ತುಮಕೂರು ಡಿಸಿ ಶುಭ ಕಲ್ಯಾಣ್ ಇ-ಮೇಲ್ ಐಡಿಗೆ ಬೆದರಿಕೆ ಇ-ಮೇಲ್ ಮಾಡಲಾಗಿತ್ತು. ಡಿಸಿ ಕಚೇರಿಯಲ್ಲಿ ತಪಾಸಣೆಯನ್ನು ಬಾಂಬ್ ಪತ್ತೆ ದಳ, ಶ್ವಾನ ದಳದಿಂದ ನಡೆಸಲಾಗಿತ್ತು.




