ಶಿವಮೊಗ್ಗ : ಕೇವಲ 22 ವರ್ಷದ ವಿದ್ಯಾರ್ಥಿನಿಯೊಬ್ಬಳು ಹೃದಯಾಘಾತಕ್ಕೆ ಬಲಿಯಾಗಿರುವ ದುರಂತ ಘಟನೆ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲ್ಲೂಕಿನಲ್ಲಿ ನಡೆದಿದೆ.
ಮೃತ ವಿದ್ಯಾರ್ಥಿನಿಯನ್ನು ದಿಶಾ (22) ಎಂದು ಗುರುತಿಸಲಾಗಿದೆ. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಮೂಲದವರಾದ ದಿಶಾ, ಶೃಂಗೇರಿ ಪಟ್ಟಣದ ಕಾಲೇಜಿನಲ್ಲಿ ಬಿಕಾಂ ಅಂತಿಮ ವರ್ಷದ ವಿದ್ಯಾರ್ಥಿನಿಯಾಗಿದ್ದರು.
ಘಟನೆ ಇಂದು ಬೆಳಿಗ್ಗೆ ನಡೆದಿದೆ. ಶೃಂಗೇರಿ ಪಟ್ಟಣದ ಹಾಸ್ಟೆಲ್‌ನಲ್ಲಿ ನೆಲೆಸಿದ್ದ ದಿಶಾ ಅವರಿಗೆ ಇದ್ದಕ್ಕಿದ್ದಂತೆ ತೀವ್ರ ಎದೆನೋವು ಕಾಣಿಸಿಕೊಂಡಿದೆ.
ನೋವಿನ ತೀವ್ರತೆಗೆ ತಕ್ಷಣವೇ ಕುಸಿದು ಬಿದ್ದ ವಿದ್ಯಾರ್ಥಿನಿ ಸಾವನ್ನಪ್ಪಿದ್ದಾರೆ. ಆರೋಗ್ಯವಂತ ಯುವಜನರೂ ಹೀಗೆ ಅಕಾಲಿಕವಾಗಿ ಪ್ರಾಣ ಕಳೆದುಕೊಳ್ಳುತ್ತಿರುವುದು ಸಾರ್ವಜನಿಕ ವಲಯದಲ್ಲಿ ತೀವ್ರ ಕಳವಳಕ್ಕೆ ಕಾರಣವಾಗಿದೆ.




