ಬಾಗಲಕೋಟೆ: ಬೆಳಗಾವಿ ಮೂಲದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರವೆಸಗಿದ್ದ ಪ್ರಕರಣದಲ್ಲಿ ಉತ್ತರ ಕರ್ನಾಟಕದ ಖ್ಯಾತ ಜನಪದ ಸಿಂಗರ್, ಮ್ಯೂಸಿಕ್ ಮೈಲಾರಿಯನ್ನು ಪೊಲೀಸರು ಬಂಧಿಸಿದ್ದಾರೆ.
ಮೈಲಾರಿ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗುತ್ತಿದ್ದಂತೆ ತಲೆಮರೆಸಿಕೊಂಡಿದ್ದ ಆತ, ಮಹಾರಾಷ್ಟ್ರದ ಕಳೆದೆ ಹೊರಟಿದ್ದ.ಈ ವೇಳೆ ಜತ್ತ ವ್ಯಾಪ್ತಿಯಲ್ಲಿ ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಕೆಲ ದಿನಗಳ ಹಿಂದೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಬಳಿ ಮ್ಯೂಸಿಕ್ ಮೈಲಾರಿ ತಂಡದಿಂದ ಆರ್ಕೆಸ್ಟ್ರಾ ಆಯೋಜಿಸಲಾಗಿತ್ತು. ಈ ವೇಳೆ ಬೆಳಗಾವಿ ಮೂಲದ 15 ವರ್ಷದ ಅಪ್ರಾಪ್ತೆ ವೇದಿಕೆಯಲ್ಲಿ ಮೈಲಾರಿ ಹಾಡಿದ ಹಾಡಿಗೆ ಡ್ಯಾನ್ಸ್ ಮಾಡಿದ್ದಳು.
ಅದೇ ಬಾಲಕಿಯನ್ನು ತಡರಾತ್ರಿ ಹೋಟೆಲ್ ಗೆ ಕರೆದೊಯ್ದು ಮೈಲಾರಿ ಅತ್ಯಾಚಾರವೆಸಗಿದ್ದಾನೆ ಎಂದು ಆರೋಪಿಸಿಸಲಾಗಿದೆ.
ಸಂತ್ರಸ್ತೆ ನೀಡಿದ ದೂರಿನ ಹಿನ್ನೆಲೆಯಲ್ಲಿ ಮೈಲಾರಿ ಸೇರಿ ಏಳು ಜನರ ವಿರುದ್ಧ ಪೋಕ್ಸೋ ಕೇಸ್ ದಾಖಲಾಗಿತ್ತು. ಬೆಲಗಾವಿಯಲ್ಲಿ ದಾಖಲಾಗಿದ್ದ ಕೇಸ್ ನ್ನು ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ಠಾಣೆಗೆ ವರ್ಗಾಯಿಸಲಾಗಿತ್ತು.
ಆರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು. ಆದರೆ ಪ್ರಮುಖ ಆರೋಪಿ ಮೈಲಾರಿ ತಲೆ ಮರೆಸಿಕೊಂಡಿದ್ದ ಇದೀಗ ಮಹಾರಾಷ್ಟ್ರಕ್ಕೆ ಎಸ್ಕೇಪ್ ಆಗುತ್ತಿದ್ದ ಮೈಲಾರಿಯನ್ನು ತಡರಾತ್ರಿ ಪೊಲೀಸರು ಬಂಧಿಸಿದ್ದಾರೆ.




