ಬೆಳಗಾವಿ: ಕಬ್ಬು ಕಟಾವು ಮಾಡುವ ಯಂತ್ರಕ್ಕೆ ಸಿಲುಕಿ ಕಾರ್ಮಿಕರಿಬ್ಬರು ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ಬೆಳಗಾವಿಯಲ್ಲಿ ನಡೆದಿದೆ.
ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನಲ್ಲಿ ಈ ದುರಂತ ಸಂಭವಿಸಿದೆ. ಬಾರವ್ವ ಕೋಬಡಿ (60) ಹಾಗೂ ಲಕ್ಷ್ಮೀಬಾಯಿ ರುದ್ರಗೌಡರ್ (65) ಮೃತ ದುರ್ದೈವಿಗಳು.ಕಬ್ಬಿನ ಗದ್ದೆಗೆ ಕೂಲಿ ಕೆಲಸಕ್ಕೆಂದು ಬಂದಿದ್ದರು.
ಕಬ್ಬು ಕಟಾವು ಮಾಡುವ ವೇಳೆ ಮುಂದೆ ನೀಡದೇ ಏಕಾಏಕಿ ಯಂತ್ರವನ್ನು ಚಾಲಕ ಚಲಿಸಿದ್ದು, ಯಂತ್ರಕ್ಕೆ ಸಿಲುಕಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಚಾಲಕನ ನಿರ್ಲಕ್ಷ್ಯಕ್ಕೆ ಇಬ್ಬರು ಕಾರ್ಮಿಕರು ಪ್ರಾಣ ಕಳೆದುಕೊಂಡಿದ್ದಾರೆ. ಸ್ಥಳದಲ್ಲಿ ಕುಟುಂಬದವರ ಆಕ್ರಂದನ ಮುಗಿಲುಮುಟ್ತಿದೆ. ಅಥಣಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.




