ಬಾಗಲಕೋಟೆ: ಗದಗ ಜಿಲ್ಲಾಧಿಕಾರಿ ಕಚೇರಿ, ಮಂಗಳೂರು ಆರ್.ಟಿ.ಓ ಕಚೇರಿಗಳಿಗೆ ಬಾಂಬ್ ಬೆದರಿಕೆ ಕರೆ ಬೆನ್ನಲ್ಲೇ ಇದೀಗ ಬಾಗಲಕೋಟೆ ಜಿಲ್ಲಾಧಿಕಾರಿ ಕಚೇರಿಗೆ ಬಾಂಬ್ ಬೆದರಿಕೆ ಹಾಕಲಾಗಿದೆ.ಬಾಗಲಕೋಟೆ ಡಿಸಿ ಕಚೇರಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಸಂದೇಶ ರವಾನಿಸಲಾಗಿದೆ.
ಬಾಂಬ್ ಬೆದರಿಕೆ ಹಿನ್ನೆಲೆಯಲ್ಲಿ ಡಿಸಿ ಕಚೇರಿಗೆ ಪೊಲೀಸರು, ಬಾಂಬ್ ಪತ್ತೆ ದಳ, ಬಾಂಬ್ ನಿಷ್ಕ್ರಿಯ ದಳ, ಶ್ವಾನ ದಳ ದೌಡಾಯಿಸಿದ್ದು, ತಪಾಸಣೆ ನಡೆಸಿದೆ.ಡಿಸಿ ಚೇಂಬರ್, ಡಿಸಿ ಕಚೇರಿಯ ಕೊಠಡಿಗಳು ಸೇರಿದಂತೆ ಸುತ್ತಮುತ್ತ ಪರಿಶೀಲನೆ ನಡೆಸಲಾಗಿದೆ.




