ಬೆಳಗಾವಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅನಾರೋಗ್ಯವಾಗಿದ್ದು, ಯಾವುದೇ ಕಾರ್ಯಕ್ರಮಗಳಲ್ಲಿ ಭಾಗಿಯಾಗದೇ ವಿಶ್ರಾಂತಿ ಪಡೆಯುತ್ತಿದ್ದಾರೆ.
ಸಿಎಂ ಸಿದ್ದರಾಮಯ್ಯ ಅವರಿಗೆ ಹೊಟ್ತೆನೋವು ಹಿನ್ನೆಲೆಯಲ್ಲಿ ಬೆಳಗಾವಿಯ ಸರ್ಕ್ಯೂಟ್ ಹೌಸ್ ನಲ್ಲಿಯೇ ವಿಶ್ರಾಂತಿ ಪಡೆಯುತ್ತಿದ್ದಾರೆ.
ಮಧ್ಯಾಹ್ನದಿಂದ ಸದನಕ್ಕೂ ಗೈರಾಗಿದ್ದು, ಸಂಜೆಯವರೆಗೂ ಯಾವುದೇ ಕಾರ್ಯಕ್ರಮಗಳಿಗೆ ಭಾಗಿಯಾಗದೇ ವಿಶ್ರಾಂತಿ ಪಡೆಯುತ್ತಿದ್ದಾರೆ.
ಈ ನಡಿವೆ ಸರ್ಕ್ಯೂಟ್ ಹೌಸ್ ಗೆ ಆಗಮಿಸಿದ ಜೆಡಿಎಸ್ ಹಿರಿಯ ಶಾಸಕ ಜಿ.ಟಿ.ದೇವೇಗೌಡ, ಗೋಕಾಕ್ ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿದರು.




