ಉತ್ತರಕನ್ನಡ : ರಾಜ್ಯದಲ್ಲಿ ಸಿಎಂ ಬದಲಾವಣೆ ಸಂಬಂಧ ಚರ್ಚೆ ನಡೆಯುತ್ತಿದೆ. ಇದರ ಬೆನ್ನಲ್ಲೆ ಡಿನ್ನರ್ ಪೊಲಿಟಿಕ್ಸ್ ಹೆಚ್ಚಾಗಿದೆ.
ಸಿಎಂ ಸಿದ್ದರಾಮಯ್ಯ ಡಿಸಿಎಂ. ಡಿಕೆ ಶಿವಕುಮಾರ್ ಬ್ರೇಕ್ ಫಾಸ್ಟ್ ಪೊಲಿಟಿಕ್ಸ್ ಮೂಲಕ ಒಗ್ಗಟ್ಟು ಪ್ರದರ್ಶನ ಮಾಡಿದ್ದರು. ನಿನ್ನೆ ಸತೀಶ್ ಜಾರಕಿಹೊಳಿ ಡಿನ್ನರ್ ಪಾರ್ಟಿ ನಡೆಸಿದ್ದರು.ಅಲ್ಲದೇ ಸದನದಲ್ಲೂ ಕೂಡ ನಾಯಕತ್ವ ಬದಲಾವಣೆ ಚರ್ಚೆ ನಡೆಯಿತು.
ಇದರ ಮಧ್ಯ ಡಿಸಿಎಂ ಡಿಕೆ ಶಿವಕುಮಾರ್ ಸ್ಪೋಟಕ ಹೇಳಿಕೆ ನೀಡಿದ್ದು, ನನ್ನ ಮತ್ತು ಸಿದ್ದರಾಮಯ್ಯ ಮಧ್ಯೆ ಒಪ್ಪಂದ ನಡೆದಿದೆ.
ನಾವಿಬ್ಬರೂ ಮಾತನಾಡಿಕೊಂಡಿದ್ದೇವೆ, ಅದರಂತೆ ನಡೆದುಕೊಳ್ಳುತ್ತೇವೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.
ಅಂಕೋಲಾ ತಾಲೂಕಿನ ಆಂದ್ಲೆ ಗ್ರಾಮದ ಜಗದೀಶ್ವರಿ ಅಮ್ಮನವರ ದೇವಸ್ಥಾನಕ್ಕೆ ಡಿಕೆಶಿ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು. ಈ ಸಂದರ್ಭದಲ್ಲಿ, ನಾನು ಯಾವತ್ತೂ ಐದು ವರ್ಷ ಇರುವುದಿಲ್ಲ ಎಂದು ಹೇಳಿಲ್ಲ. ಹೈಕಮಾಂಡ್ ನಿರ್ಧಾರ ಆಗಿದೆ. ಹೈಕಮಾಂಡ್ ಸಿಎಂ ಪರವಾಗಿ ಇದ್ದದ್ದಕ್ಕೆ ಅವರು ಸಿಎಂ ಆಗಿದ್ದಾರೆ ಎಂದರು.
ಇನ್ನು ಅಧಿವೇಶನದ ಕಡೇ ದಿನ ಸಿಎಂ ಸಿದ್ದರಾಮಯ್ಯ, ಎರಡೂವರೆ ವರ್ಷ ಸಿಎಂ ಎಂದು ತೀರ್ಮಾನ ಆಗಿಲ್ಲ. ಈಗ ನಾನೇ ಮುಖ್ಯಮಂತ್ರಿ, ಮುಂದೆಯೂ ನಾನೇ ಇರುತ್ತೇನೆ.
ಈಗ ನಾನು ಸಿಎಂ ಆಗಿದ್ದೇನೆ, ನನ್ನ ಪ್ರಕಾರ ಹೈಕಮಾಂಡ್ ನನ್ನ ಪರವೇ ಇದೆ. ಈಗಲೂ ನಾನೇ ಮುಖ್ಯಮಂತ್ರಿ, ಹೈಕಮಾಂಡ್ ಹೇಳೋವರೆಗೂ ನಾನೇ ಮುಖ್ಯಮಂತ್ರಿ ಎಂದು ಹೇಳುವ ಮೂಲಕ ಫುಲ್ ಟರ್ಮ್ ಸಿಎಂ ನಾನು ಆಗಿರುತ್ತೇನೆ ಎಂದು ಸಿದ್ದರಾಮಯ್ಯ ಬ್ರಹ್ಮಾಸ್ತ್ರ ಪ್ರಯೋಗಿಸಿದ್ದರು.




