ಬೆಂಗಳೂರು : ರಾಜ್ಯದಲ್ಲಿ ಸರಣಿ ಹೃದಯಾಘಾತ ಪ್ರಕರಣಗಳು ವರದಿಯಾಗಿದ್ದು, ಒಂದೇ ದಿನ ಶಿಕ್ಷಕಿ ಸೇರಿದಂತೆ ಮೂವರು ಬಲಿಯಾಗಿದ್ದಾರೆ.
ಹಾಸನ ಜಿಲ್ಲೆಯಲ್ಲಿ ಶಿಕ್ಷಕಿ ಸೇರಿದಂತೆ ಇಬ್ಬರು ಮೃತಪಟ್ಟಿದ್ದಾರೆ. ಹಾಸನ ಜಿಲ್ಲೆಯ ಅರಕಲಗೋಡು ತಾಲೂಕಿನ ದೊಡ್ಡಳ್ಳಿ ಗ್ರಾಮದ ಸುಧಾಮಣಿ (58) , ಹೊಳೆನರಸೀಪುರ ತಾಲೂಕಿನ ಗುಲಗಂಜಿಹಳ್ಳಿ ಗ್ರಾಮದ ಪರಮೇಶ್ (35) ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
ಸುಧಾಮಣಿ ದೊಡ್ಡಳ್ಳಿ ಗ್ರಾಮದ ಸರ್ಕಾರಿ ಶಾಲೆಯ ಶಿಕ್ಷಕಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಪರಮೇಶ್ ಹೊಳೆನರಸೀಪುರ ಹೋಟೆಲ್ ನಲ್ಲಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ . ಅದೇ ರೀತಿ ಬೆಂಗಳೂರಿನಲ್ಲಿ ಹಿರಿಯ ಪತ್ರಕರ್ತ ದೊಡ್ಡಬೊಮ್ಮಯ್ಯ ನಿಧನರಾಗಿದ್ದಾರೆ.
ಬಿಎಂಟಿಸಿ ಬಸ್ ನಲ್ಲೇ ಹೃದಯಾಘಾತ
ಬೆಂಗಳೂರಿನಲ್ಲಿ ಹಿರಿಯ ಪತ್ರಕರ್ತ ದೊಡ್ಡಬೊಮ್ಮಯ್ಯ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಬೆಳಗಾವಿ ಅಧಿವೇಶನ ವರದಿಗೆ ತೆರಳಿದ್ದ ದೊಡ್ಡಬೊಮ್ಮಯ್ಯ ಅವರು ಕೆಲಸ ಮುಗಿಸಿ ನಂತರ ಮೆಜೆಸ್ಟಿಕ್ ಗೆ ಬಂದು ಬಿಎಂಟಿಸಿ ಬಸ್ ಹತ್ತಿದ್ದರು. ಆದರೆ ಬಸ್ ನಲ್ಲೇ ಅವರಿಗೆ ಹೃದಯಾಘಾತ ಸಂಭವಿಸಿದೆ. ಬಸ್ ನಲ್ಲೇ ಹೃದಯಾಘಾತದಿಂದ ಅವರು ನಿಧನರಾಗಿದ್ದಾರೆ.
ತುಮಕೂರು ಜಿಲ್ಲೆ ಪಾವಗಡ ತಾಲೂಕಿನ ರೊಪ್ಪ ಗ್ರಾಮದ ನಿವಾಸಿಯಾಗಿದ್ದ ದೊಡ್ಡಬೊಮ್ಮಯ್ಯ ಅವರು ಸಂಜೆವಾಣಿ. ದೂರದರ್ಶನ, ಆಕಾಶವಾಣಿಯಲ್ಲಿ ವರದಿಗಾರರಗಾಗಿ ಸೇವೆ ಸಲ್ಲಿಸಿದ್ದರು. ದೊಡ್ಡಬೊಮ್ಮಯ್ಯ ನಿಧನಕ್ಕೆ ಸಹೋದ್ಯೋಗಿಗಳು, ಹಲವರು ಕಂಬನಿ ಮಿಡಿದಿದ್ದಾರೆ.




