ಬೆಂಗಳೂರು: ರಾಜ್ಯಾದ್ಯಂತ ಚಳಿಯ ತೀವ್ರತೆ ಹೆಚ್ಚಾಗಿದೆ. ಹವಾಮಾನ ಇಲಾಖೆಯಿಂದ 7 ಜಿಲ್ಲೆಗಳಿಗೆ ಶೀತಗಾಳಿಯ ಮುನ್ಸೂಚನೆ ನೀಡಲಾಗಿದೆ..
ಮುಂದಿನ ಎರಡು ದಿನಗಳ ಕಾಲ ಕಲಬುರಗಿ, ಬೀದರ್, ರಾಯಚೂರು, ಯಾದಗಿರಿ, ಬಾಗಲಕೋಟೆ ಬೆಳಗಾವಿಯಲ್ಲಿ ತೀವ್ರ ಶೀತ ಗಾಳಿ ಬೀಸುವ ಸಾಧ್ಯತೆ ಇದ್ದು, ಹವಾಮಾನ ಇಲಾಖೆ ಅರೇಂಜ್ ಅಲರ್ಟ್ ನೀಡಿದೆ.ಈ ಜಿಲ್ಲೆಗಳಲ್ಲಿ ವಾಡಿಕೆಗಿಂತ ಆರರಿಂದ ಏಳು ಡಿಗ್ರಿ ಸೆಲ್ಸಿಯಸ್ ನಷ್ಟು ಉಷ್ಣಾಂಶ ಕುಸಿತವಾಗಿದ್ದು, ಚಳಿಯ ತೀವ್ರತೆ ಹೆಚ್ಚಾಗಿದೆ.
ರಾಜ್ಯದಲ್ಲಿ ಕೂಡ ಚಳಿಯ ತೀವ್ರತೆ ಹೆಚ್ಚಾಗಿದ್ದು, ವಿಜಯಪುರದಲ್ಲಿ ಶನಿವಾರ ಅತಿ ಕಡಿಮೆ ತಾಪಮಾನ 6.9 ಡಿಗ್ರಿ ಸೆಲ್ಸಿಯಸ್ ವರದಿಯಾಗಿದೆ.
ಇದು ಕಳೆದ ಹತ್ತು ವರ್ಷಗಳಲ್ಲಿ ಮೂರನೇ ಅತಿ ಕಡಿಮೆ ಉಷ್ಣಾಂಶ ದಾಖಲಾಗಿದೆ. ಧಾರವಾಡ, ಹಾವೇರಿ, ಕೊಪ್ಪಳ, ವಿಜಯನಗರ, ದಾವಣಗೆರೆ, ಬಳ್ಳಾರಿ, ಚಿತ್ರದುರ್ಗ, ತುಮಕೂರು, ಶಿವಮೊಗ್ಗ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಮಂಡ್ಯ, ಹಾಸನ, ಮೈಸೂರು, ಬೆಂಗಳೂರು ಗ್ರಾಮಾಂತರದಲ್ಲಿ ಡಿಸೆಂಬರ್ 22 ರವರೆಗೆ ಶೀತ ಗಾಳಿ ಬೀಸಲಿದ್ದು, ಯೆಲ್ಲೋ ಅಲರ್ಟ್ ನೀಡಲಾಗಿದೆ.




