ಬೆಂಗಳೂರು: ಜೇನು ಕೃಷಿ ಕಲಿಸುವುದಾಗಿ ಹೇಳಿಕೊಂಡಿದ್ದ ವ್ಯಕ್ತಿಯೊಬ್ಬ ಅಪ್ರಾಪ್ತ ಬಾಲಕಿ ಮೇಲೆ ನಿರಂತರ ಅತ್ಯಾಚಾರವೆಸಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಅಬ್ದುಲ್ ಗಪೂರ್ ಎಂಬಾತ ತಾನು ಜೇನು ಕೃಷಿ ಕಲಿಸಿಕೊಡುವುದಾಗಿ ಹೇಳಿಕೊಂಡಿದ್ದ.ಇದನ್ನು ನಂಬಿ ಬೆಳಗಾವಿ ಮೂಲದ ಅಪ್ರಾಪ್ತ ಬಾಲಕಿಯ ಪೋಷಕರು ಮಗಳು ಜೇನು ಕೃಷಿ ಕಲಿಯಲೆಂದು ಆರೋಪಿ ಮನೆಯಲ್ಲಿ ಬಿಟ್ಟು ಹೋಗಿದ್ದರು. ಕಾಮುಕ ಅಬ್ದುಲ್ ಗಪೂರ್ ಡಿಸೆಂಬರ್ 2 ರಿಂದ ಬಾಲಕಿ ಮೇಲೆ ನಿರಂತರ ಅತ್ಯಾಚಾರವೆಸಗಿದ್ದಾನೆ.
ಸಂತ್ರಸ್ತೆ ನೀಡಿದ ದೂರಿನ ಹಿನ್ನೆಲೆಯಲ್ಲಿ ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಬ್ದುಲ್ ಗಪೂರ್ ನನ್ನು ಬಂಧಿಸಿರುವ ಪೊಲೀಸರು ಪೋಕ್ಸೋ ಕೇಸ್ ದಾಖಲಿಸಿದ್ದಾರೆ.




