ಕಲಬುರಗಿ: ನಗರದ ದಕ್ಷಿಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ನಂದಿಕೂರ ಗ್ರಾಮದ ಬಳಿ ಬಿಜೆಪಿ ಕಾರ್ಯಕರ್ತೆಯೊಬ್ಬರು ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಮೃತರನ್ನು ಕಲಬುರಗಿಯ ಬ್ರಹ್ಮಪೂರ ಬಡಾವಣೆಯ ನಿವಾಸಿ ಜ್ಯೋತಿ ಚಿದಾನಂದ ಸಿರಗೋಳಿ (34) ಎಂದು ಗುರುತಿಸಲಾಗಿದೆ. ಪೊಲೀಸ್ ಮೂಲಗಳ ಪ್ರಕಾರ, ಶನಿವಾರ ರಾತ್ರಿ ಜ್ಯೋತಿ ಅವರು ನಂದಿಕೂರ ಗ್ರಾಮದ ನಿವಾಸಿ ಹಾಗೂ ರಿಯಲ್ ಎಸ್ಟೇಟ್ ಉದ್ಯಮಿ ಮಲ್ಲಿನಾಥ್ ಬಿರಾದಾರ್ ಅವರ ಮನೆಗೆ ತೆರಳಿ ಬಾಗಿಲು ತಟ್ಟಿದ್ದಾರೆ. ಬಾಗಿಲು ತೆರೆಯುತ್ತಿದ್ದಂತೆ ಜ್ಯೋತಿ ಅವರು ತಮ್ಮ ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದಾರೆ ಎನ್ನಲಾಗಿದೆ.
ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡ ಜ್ಯೋತಿ ಅವರನ್ನು ತಕ್ಷಣ ಕಲಬುರಗಿ ನಗರದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದು, ಆತ್ಮಹತ್ಯೆಗೆ ಕಾರಣ ಸ್ಪಷ್ಟವಾಗಿಲ್ಲ.
ವರದಿ : ವೆಂಕಟಪ್ಪ ಕೆ ಸುಗ್ಗಾಲ್




