ರಾಮದುರ್ಗ: ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ರವಿವಾರ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ಬೆಳಗಾವಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬೆಳಗಾವಿ , ರೋಟರಿ ಕ್ಲಬ್ ಆಫ ರಾಮದುರ್ಗ, ಇನ್ನರ್ ವ್ಹೀಲ್ ಕ್ಲಬ್ ಆಫ ರಾಮದುರ್ಗ ಇವರ ಸಹಯೋಗದಲ್ಲಿ ಮಕ್ಕಳಿಗಾಗಿ ಪಲ್ಸ ಪೋಲಿಯೋ ಲಸಿಕಾ ಅಭಿಯಾನ ಕಾರ್ಯಕ್ರಮ ಜರುಗಿತು.
ಈ ಕಾರ್ಯಕ್ರಮವನ್ನು ಉದ್ಘಾಟಿಸಿ ನಂತರ ಮಾಧ್ಯಮ ದವರ ಜತೆ ಮಾತನಾಡಿದ ಶಾಸಕ ಅಶೋಕ ಪಟ್ಟಣ ಅವರು “ ಮಕ್ಕಳು ಸದೃಢವಾಗಿ ಬೆಳೆಯಲು, ಆರೋಗ್ಯವಾಗಿರಲು ಪ್ರತಿವರ್ಷದಂತೆ ಈ ವರ್ಷವೂ ಪಲ್ಸ ಪೋಲಿಯೋ ಲಸಿಕಾ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದೇವೆ. ರಾಮದುರ್ಗ ಸರ್ಕಾರಿ ಆಸ್ಪತ್ರೆ ಅಭಿವೃದ್ದಿಗಾಗಿ ಸರ್ಕಾರ ಈಗಾಗಲೇ ಅನುದಾನ ಘೋಷಿಸಿದೆ. ಮುಂದಿನ 2/3 ತಿಂಗಳಿನೂಳಗೆ ಈ ಕಾಮಗಾರಿಯನ್ನು ಪ್ರಾರಂಭ ಮಾಡ್ತೇವೆ.
ಬೆಳಗಾವಿ ಅಧಿವೇಶನದ ಸಂದರ್ಭದಲ್ಲಿ ರಾಮದುರ್ಗ ತಾಲೂಕಿನ ನೀರಾವರಿ ಯೋಜನೆಗಳ ಕುರಿತು ನೀರಾವರಿ ಸಚಿವರು ಹಾಗೂ ಅಧಿಕಾರಿಗಳೊಂದಿಗೆ ಸಭೆ ನಡೆಸಲಾಗಿದೆ ವೀರಭದ್ರ ಏತ ನೀರಾವರಿ ಯೋಜನೆ ಕಾಮಗಾರಿಯು ಬಹಳ ವಿಳಂಬವಾಗಿದೆ. ಆದ್ದರಿಂದ ಈಗಿರುವ ಗುತ್ತಿಗೆಯನ್ನು ರದ್ದುಪಡಿಸಿ ಮತ್ತೊಮ್ಮೆ ಹೊಸ ಟೆಂಡರ್ ಕರೆದು ಆದಷ್ಟು ಬೇಗ ಕಾಮಗಾರಿಯನ್ನು ಮುಗಿಸುತ್ತೇವೆ. ಅದೇ ರೀತಿ ಸಾಲಾಪೂರ ಏತ ನೀರಾವರಿ ಯೋಜನೆ ಕಾಮಗಾರಿಯನ್ನು ಸಹ ಪೂರ್ಣ ಗೊಳಿಸಲು ಸಭೆಯಲ್ಲಿ ನಿರ್ಧರಿಸಲಾಗಿದೆ.
ಲೋಕಾಪೂರದಿಂದ ಧಾರವಾಡ ರೈಲ್ವೆ ಮಾರ್ಗಕ್ಕೆ ಅಗತ್ಯ ಭೂಮಿ ಒದಗಿಸುವುದಾಗಿ ಸಿಎಂ ಸಿದ್ದರಾಮಯ್ಯ ಅವರು ಕೇಂದ್ರ ಸರ್ಕಾರಕ್ಕೆ ಈಗಾಗಲೇ ಪತ್ರ ಬರೆದಿದ್ದಾರೆ. ರಾಮದುರ್ಗಕ್ಕೆ ರೈಲ್ವೆ ಸಂಪರ್ಕ ಕಲ್ಪಿಸಲು ನಾವು ಬದ್ದ ರಾಗಿದ್ದೇವೆ. ಪಟ್ಟಣದಲ್ಲಿ ಕ್ರೀಡಾಂಗಣಕ್ಕಾಗಿ ಈಗಾಗಲೇ ಎರಡು ಸ್ಥಳಗಳನ್ನು ಗುರುತಿಸಿದ್ದೇವೆ . ಅದರಲ್ಲಿ ಒಂದು ಜಾಗ ಫೈನಲ್ ಮಾಡಿ ಒಂದು ವರ್ಷದೊಳಗೆ ಕ್ರೀಡಾಂಗಣವನ್ನು ನಿರ್ಮಾಣ ಮಾಡ್ತೇವೆ ಎಂದು ಹೇಳಿದರು.
ವರದಿ: ಮಂಜುನಾಥ ಕಲಾದಗಿ




