ಬೆಂಗಳೂರು : ರಾಜ್ಯದಲ್ಲಿ ಆತ್ಮಹತ್ಯೆ ಮಾಡಿಕೊಂಡ ರೈತರ ಕುಟುಂಬಕ್ಕೆ ನೀಡುವ ಪರಿಹಾರದ ಮೊತ್ತ 5 ಲಕ್ಷಕ್ಕೆ ಹೆಚ್ಚಳ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. 11:11:2015 ರಂದು ಸರ್ಕಾರ ಈ ಆದೇಶ ಹೊರಡಿಸಿದೆ.
ಬೆಳೆಹಾನಿ, ಸಾಲಭಾದೆ. ಬೆಲೆಕುಸಿತ ಇತ್ಯಾದಿ ಕಾರಣಗಳಿಂದ ಸಂಕಷ್ಟಕ್ಕೊಳಗಾದ ಹಲವಾರು ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದನ್ನು ಗಮನಿಸಿದ ರಾಜ್ಯ ಸರ್ಕಾರವು.
ಮೇಲೆ ಓದಲಾದ (1) ರ ಸರ್ಕಾರದ ಆದೇಶದಲ್ಲಿ 2003-04ನೇ ಸಾಲಿನಿಂದ ಸಾಲದ ಹೊರೆಯಿಂದ ಆತ್ಮಹತ್ಯೆ ಮಾಡಿಕೊಂಡ ಪ್ರತಿಯೊಂದು ರೈತರ ಕುಟುಂಬಗಳಿಗೆ ತಲಾ 1.00 ಲಕ್ಷರೂ.ಗಳ (ರೂ. ಒಂದು ಲಕ್ಷ) ಪರಿಹಾರವನ್ನು ಒದಗಿಸಲು ಅವಕಾಶ ಕಲ್ಪಿಸುತದೆ.
.ಆತ್ಮಹತ್ಯೆಗೆ ಸಾಲ ನೀಡುವ ಸಂಸ್ಥೆಗಳಿಂದ ಪಡೆದ ಸಾಲದ ಹೊರೆಯೇ ಸಂಭವನೀಯ ಕಾರಣವೆಂಬ ವಿಷಯವನ್ನು ದೃಢೀಕರಣ ಮಾಡಿಕೊಂಡು ಈ ಬಗ್ಗೆ ದೃಢೀಕರಣ ಪತ್ರ ನೀಡುವ ಬಗ್ಗೆ ಪ್ರತಿ ಉಪ ವಿಭಾಗ ಮಟ್ಟದಲ್ಲಿ ಉಪ ವಿಭಾಗಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಸಮಿತಿಯೊಂದನ್ನು ರಚಿಸಲಾಗಿದ್ದು ಸದರಿ ಸಮಿತಿಯ ನಿರ್ಣಯದ ಆಧಾರದ ಮೇರೆಗೆ ಸಾಲದ ಬಾಧೆಯಿಂದ ಸಂಕಷ್ಟಕ್ಕೊಳಗಾಗಿ ಆತ್ಮಹತ್ಯೆ ಮಾಡಿಕೊಂಡ ರೈತರ ಕುಟುಂಬಗಳಿಗೆ ರಾಜ್ಯ ಸರ್ಕಾರದ ವತಿಯಿಂದ ತಲಾ 1.00ಲಕ್ಷ ರೂ. ಪರಿಹಾರವನ್ನು ನೀಡಲಾಗುತ್ತಿದ್ದು, ಸದರಿ ಪರಿಹಾರವನ್ನು ದಿನಾಂಕ:01-04-2015ರಿಂದ ಜಾರಿಗೆ ಬರುವಂತೆ ರೂ.1.00 ಲಕ್ಷದ ಬದಲಾಗಿ ರೂ.2.00ಲಕ್ಷ ನಗದು ನೀಡಲು ಮೇಲೆ (2) ರಲ್ಲಿ ಓದಲಾದ ಸರ್ಕಾರದ ಆದೇಶದಲ್ಲಿ ಅನುಮತಿ ನೀಡಲಾಗಿದೆ.
ಮಾನ್ಯ ಮುಖ್ಯಮಂತ್ರಿಗಳು ಹಾವೇರಿ ಜಿಲ್ಲೆಗೆ ಬರ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಭೇಟಿ ನೀಡಿದ ಸಂಧರ್ಭದಲ್ಲಿ ರೈತರಿಗೆ ಹೆಚ್ಚಿನ ಪರಿಹಾರ ನೀಡಲು ಅನುವಾಗುವಂತೆ ಆತ್ಮಹತ್ಯೆ ಮಾಡಿಕೊಂಡು ಮೃತರಾದ ರೈತರ ಕುಟುಂಬಗಳಿಗೆ ಪಾವತಿಸಬೇಕಾದ ಪರಿಹಾರ ಮೊತ್ತವನ್ನು ರೂ 2.00 ಲಕ್ಷಗಳಿಗೆ ಹೆಚ್ಚಿಸಲಾಗಿರುವುದನ್ನು ಮತ್ತೆ ರೂ 5.00 ಲಕ್ಷಕ್ಕೆ ಹೆಚ್ಚಿಸಲಾಗುವುದು. ಮುಂದುವರೆದು, ಹಲವಾರು ಕೃಷಿ ಕಾರ್ಮಿಕರು ರೈತರಿಂದ ಜಮೀನನ್ನು ಒಪ್ಪಂದದ ಮೇರೆಗೆ ಪಡೆದು ಕೃಷಿ ಉತ್ಪಾದನೆಯಲ್ಲಿ ತೊಡಗಿರುತ್ತಾರೆ.
ಅಂತಹವರಿಗೂ ಸಹ ಆತ್ಮಹತ್ಯೆ ಮಾಡಿಕೊಂಡ ರೈತ ಕುಟುಂಬಗಳಿಗೆ ನೀಡುವ ಪರಿಹಾರವನ್ನು ವಿಸ್ತರಿಸಲಾಗುವುದು ಎಂದು ಘೋಷಿಸಿರುತ್ತಾರೆ. ಈ ಸಂಬಂಧ ಮೇಲೆ (3) ರಲ್ಲಿ ಓದಲಾದ ಟಿಪ್ಪಣಿಯಲ್ಲಿ ಮುಖ್ಯ ಕಾರ್ಯದರ್ಶಿ, ಕರ್ನಾಟಕ ಸರ್ಕಾರ ರವರು ಸರ್ಕಾರಿ ಆದೇಶ ಹೊರಡಿಸಲು ಸೂಚನೆ ನೀಡಿರುತ್ತಾರೆ.




