ಮೈಸೂರು: ರಾಜ್ಯ ಕಾಂಗ್ರೆಸ್ ನಲ್ಲಿ ನವೆಂಬರ್ ಕ್ರಾಂತಿ ಮುಗಿಯಿತು. ಈಗ ಸಂಕ್ರಾಂತಿಯಲ್ಲಿ ಕ್ರಾಂತಿ ಎಂಬ ಚರ್ಚೆ ಆರಂಭವಾಗಿದೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾಂಗ್ರೆಸ್ ನಲ್ಲಿ ಸಂಕ್ರಾಂತಿಯಲ್ಲಿಯೂ ಯಾವ ಕ್ರಾಂತಿಯೂ ಇಲ್ಲ, ಏನೂ ಇಲ್ಲ ಎಂದು ತಿಳಿಸಿದ್ದಾರೆ.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಯಾವ ಕ್ರಾಂತಿಯೂ ಇಲ್ಲ. ಏನೇ ಇದ್ದರೂ ಪಕ್ಷದ ಹೈಕಮಾಂಡ್ ತೀರ್ಮಾನ ಮಾಡುತ್ತದೆ ಎಂದು ಹೇಳಿದರು.
ಇನ್ನು ಕೆ.ಎನ್.ರಾಜಣ್ಣ ಅವರನ್ನು ಅಪೆಕ್ಸ್ ಬ್ಯಾಂಕ್ ಅಧ್ಯಕ್ಷರನ್ನಾಗಿ ಮಾಡಿದ್ದು ನಾನೇ ಎಂಬ ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿಕೆಗೆ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ, ರಾಜಣ್ಣ ಅವರನ್ನು ಅಪೆಕ್ಸ್ ಬ್ಯಾಂಕ್ ಅಧ್ಯಕ್ಷರನ್ನಾಗಿ ಮಾಡಿದ್ದು, ಎಸ್.ಎಂ.ಕೃಷ್ಣ ಹಾಗೂ ಅಂದಿನ ಸರ್ಕಾರ ಅಧಿಕಾರದಲ್ಲಿದ್ದಾಗ ಮಾಡಿದ್ದನ್ನು ನಾನು ಮಾಡಿದ್ದು ಅಂತಾ ಹೇಳಬಾರದು ಎಂದು ಟಾಂಗ್ ನೀಡಿದ್ದಾರೆ.




