Ad imageAd image

ಕಲ್ಯಾಣ ಕರ್ನಾಟಕ ಭಾಗದಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಯನ್ನು ಆದಷ್ಟು ಬೇಗ ಭರ್ತಿ ಮಾಡಲಾಗುವುದು: ಸಚಿವ ಡಾ. ಶರಣಪ್ರಕಾಶ್ ಪಾಟೀಲ್

Bharath Vaibhav
ಕಲ್ಯಾಣ ಕರ್ನಾಟಕ ಭಾಗದಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಯನ್ನು ಆದಷ್ಟು ಬೇಗ ಭರ್ತಿ ಮಾಡಲಾಗುವುದು: ಸಚಿವ ಡಾ. ಶರಣಪ್ರಕಾಶ್ ಪಾಟೀಲ್
WhatsApp Group Join Now
Telegram Group Join Now

ಸೇಡಂ: ತಾಲೂಕಿನ ಮುಧೋಳ ನಲ್ಲಿ ಆಯೋಜಿಸಿರುವ ತಾಲೂಕ ಮಟ್ಟದ ಶಿಕ್ಷಕರ ದಿನಾಚರಣೆ ಪ್ರಯುಕ್ತ ಉತ್ತಮ ಶಿಕ್ಷಕರ ಪ್ರಶಸ್ತಿ ಪ್ರದಾನ ಮತ್ತು ನಿವೃತ್ತ ಶಿಕ್ಷಕರಿಗೆ ಸನ್ಮಾನ ಸಮಾರಂಭ ಕಾರ್ಯಕ್ರಮದಲ್ಲಿ ಸೇಡಂ ಶಾಸಕರು ಹಾಗೂ ಸಚಿವರಾದ ಡಾಕ್ಟರ್ ಶರಣಪ್ರಕಾಶ್ ಪಾಟೀಲ್ ಅವರು ಕಾರ್ಯಕ್ರಮದ ಉದ್ಘಾಟನೆ ಮಾಡಿ ಮಾತನಾಡಿದರು.

ಕಲ್ಯಾಣ ಕರ್ನಾಟಕ ಭಾಗದಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಯನ್ನು ಆದಷ್ಟು ಬೇಗ ಭರ್ತಿ ಮಾಡಲಾಗುವುದು ಎಂದು ಭರವಸೆ ನೀಡಿದರು.

ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯಿಂದ ವಿಶೇಷ ಅನುದಾನದಿಂದ ಅಕ್ಷರ ಆವಿಷ್ಕಾರ ಯೋಜನೆ ರೂಪಿಸಲಾಗಿದೆ.

ಸೇಡಂ ತಾಲೂಕಿನ ಶೈಕ್ಷಣಿಕ ಮಟ್ಟ ಸುಧಾರಿಸಲು ನೂತನ ಶಾಲಾ ಕೋಣೆಗಳು ಹಾಗೂ ಅನುದಾನ ಜೊತೆಗೆ ಅನೇಕ ಕಾರ್ಯಕ್ರಮಗಳನ್ನು ಸಹ ನೀಡಲಾಗುತ್ತದೆ‌.

ಶಿಕ್ಷಣದ ಜೊತೆಗೆ ಮಕ್ಕಳಲ್ಲಿ ಮೌಲ್ಯಾಧಾರಿತ ಸಮಾಜದಲ್ಲಿ ಬದುಕುವುದು ಹೇಗೆಂಬ ಸಾಮಾಜಿಕ ಜವಾಬ್ದಾರಿಯನ್ನು ಕಲಿಸಬೇಕು ಎಂದು ಹೇಳಿದರು, ಹಾಗೂ ಸೇಡಂ ಮತಕ್ಷೇತ್ರದಲ್ಲಿ ಶಿಕ್ಷಣ ಇಲಾಖೆಗೆ ಸಂಬಂದಿಸಿದಂತೆ ಯಾವುದೇ ಕಾಮಗಾರಿಗಳಿರಲಿ ಅಥವಾ ಮನವಿಗಳಿರಲಿ ನೇರವಾಗಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಮೂಲಕ ನನ್ನನ್ನು ಸಂಪರ್ಕಿಸಿ ಎಂದು ತಿಳಿಸಿದರು.

ಈ ವೇಳೆ ಉತ್ತಮ ಶಿಕ್ಷಕರಿಗೆ ಪ್ರಶಸ್ತಿ ನೀಡುವ ಮೂಲಕ ಅಕ್ಷರ ಕಲಿಸಿದ ಅನೇಕ ಗುರುವೃಂದಕ್ಕೆ ಸನ್ಮಾನ ಮಾಡಿದರು.

ಈ ಸಂದರ್ಭದಲ್ಲಿ ತಾಲೂಕ ನೌಕರರ ಸಂಘದ ಅಧ್ಯಕ್ಷ ಅರವಿಂದ್ ಪಸರ್, ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಮಾರುತಿ ಹುಜರಾತಿ, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ದಾಮೋದರ ರೆಡ್ಡಿ ಪಾಟೀಲ್, ಮುಧೋಳ ಕಾಂಗ್ರೆಸ್ ಮುಖಂಡರಾದ ಮಧುಸೂಧನ್ ರೆಡ್ಡಿ ಪಾಟೀಲ್ ಸೇರಿದಂತೆ ಶಿಕ್ಷಣ ಇಲಾಖೆಯ ಅಧಿಕಾರಿಗಳು, ಸಂಘ ಸಂಸ್ಥೆಗಳ ಪದಾಧಿಕಾರಿಗಳು ಹಾಗೂ ಮುಧೋಳ ವಲಯ ಮಟ್ಟದ ಶಿಕ್ಷಕರು ಭಾಗವಹಿಸಿದರು.

ವರದಿ : ವೆಂಕಟಪ್ಪ ಕೆ ಸುಗ್ಗಾಲ್

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!