ಬೆಂಗಳೂರು: ರಾಜ್ಯ ರಸ್ತೆ ಸಾರಿಗೆ ನಿಗಮದಲ್ಲಿ (ಕೆಎಸ್‌ಆರ್‌ಟಿಸಿ) ಕಾರ್ಯನಿರ್ವಹಿಸುತ್ತಿರುವ ಮಹಿಳಾ ನೌಕರರಿಗೆ ಜನವರಿ 1ರಿಂದಲೇ ಋತುಚಕ್ರ ರಜೆಯನ್ನು ಜಾರಿಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ.
ಪ್ರತಿ ತಿಂಗಳು ಒಂದು ಋತುಚಕ್ರ ರಜೆಯನ್ನು ಕೆಲವು ಷರತ್ತುಗಳಿಗೆ ಒಳಪಡಿಸಿ ಜಾರಿಗೊಳಿಸಿದ್ದು, 18ರಿಂದ 52 ವಯಸ್ಸಿನ ನಿಗಮದ ಮಹಿಳಾ ನೌಕರರು ರಜೆ ಪಡೆಯಬಹುದು. ಸಾಂದರ್ಭಿಕ ರಜೆಯನ್ನು ಮಂಜೂರು ಮಾಡಲು ಸಕ್ಷಮ ಪ್ರಾಧಿಕಾರಿಯು ಈ ರಜೆ ಮಂಜೂರು ಮಾಡಬಹುದು. ಮುಂದಿನ ತಿಂಗಳಿಗೆ ವಿಸ್ತರಿಸಿಕೊಳ್ಳಲು ಅವಕಾಶವಿಲ್ಲ ಎಂದು ತಿಳಿಸಲಾಗಿದೆ.
ಕೆಎಸ್‌ಆರ್‌ಟಿಸಿ ಮಹಿಳಾ ನೌಕರರಿಗೆ ಜನವರಿ 1 ರಿಂದಲೇ ಋತುಚಕ್ರ ರಜೆ




