ಕಲಬುರಗಿ : ಗಾಳಿಯಲ್ಲಿ ಗುಂಡು ಹಾರಿಸಿ ಬಿಲ್ಡಪ್ ಕೊಟ್ಟಿದ್ದ ‘ಶಾಂತಲಿಂಗ ಶಿವಾಚಾರ್ಯ ಸ್ವಾಮೀಜಿ’ ಯನನ್ನು ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.ಸ್ವಾಮೀಜಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಭಕ್ತರು ಪ್ರತಿಭಟನೆ ನಡೆಸಿದ ಬೆನ್ನಲ್ಲೇ ಪೊಲೀಸರು ಸ್ವಾಮೀಜಿಯನ್ನ ಬಂಧಿಸಿದ್ದಾರೆ.
ಸ್ವಾಮೀಜಿಯೊಬ್ಬರು ಮಠದ ಆವರಣದಲ್ಲಿ ನಿಂತು ಬಂದೂಕಿನಿಂದ ಗಾಳಿಯಲ್ಲಿ ಗುಂಡು ಹಾರಿಸಿರುವ ಘಟನೆ ಕಲಬುರಗಿಯಲ್ಲಿ ನಡೆದಿತ್ತು. ಈ ವಿಡಿಯೋ ಕೂಡ ಸೋಶಿಯಲ್ ಮೀಡಿಯಾದಲ್ಲಿ ಭಾರಿ ವೈರಲ್ ಆಗಿತ್ತು. ಕಲಬುರಗಿ ಜಿಲ್ಲೆಯ ಉಡಚಣ ಗ್ರಾಮದ ಹಿರೇಮಠದ ಶಾಂತಲಿಂಗ ಸ್ವಾಮೀಜಿ ಮಠದ ಆವರಣದಲ್ಲಿ ನಿಂತು ಗಾಳಿಯಲ್ಲಿ ಗುಂಡು ಹೊಡೆದಿರುವ ವಿಡಿಯೋ ವೈರಲ್ ಆಗಿತ್ತು. ಈ ಬೆನ್ನಲ್ಲೇ ಅವರ ವಿರುದ್ಧ ದೂರು ದಾಖಲಾಗಿದ್ದು, ಪೊಲೀಸರು ಅವರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಕೆಲ ದಿನಗಳ ಹಿಂದೆ ಶಾಂತಲಿಂಗ ಸ್ವಾಮೀಜಿ ಕುಡಿದು ಮಠದಲ್ಲಿ ರಂಪಾಟ ನಡೆಸಿದ್ದರು. ಈ ಹಿನ್ನೆಲೆಯಲ್ಲಿ ಗ್ರಾಮಸ್ಥರು, ಭಕ್ತರು ಅವರನ್ನು ಮಠದಿಂದ ಹೊರಹಾಕಿದ್ದರು.
ಹೊಸ ಪೀಠಾಧಿಪತಿಗಳ ನೇಮಕ ಮಾಡುವ ಬಗ್ಗೆ ಚರ್ಚೆ ನಡೆದಿತ್ತು. ಈ ಬೆಳವಣಿಗೆ ಬೆನ್ನಲ್ಲೇ ಶಾಂತಲಿಂಗ ಸ್ವಾಮೀಜಿ ವಾರದ ಹಿಂದಷ್ಟೇ ಮಠದಲ್ಲಿ ಮತ್ತೆ ಪ್ರತ್ಯಕ್ಷರಾಗಿದ್ದರು. ನಂತರ ಏಕಾಏಕಿ ಮಠದ ಆವರಣದಲ್ಲಿ ನಿಂತು ಗುಂಡು ಹಾರಿಸಿದ್ದರು.
ವಿರೋಧಿಗಳನ್ನು ಹೆದರಿಸುವ ನಿಟ್ಟಿನಲ್ಲಿ ಸ್ವಾಮೀಜಿ ಗಾಳಿಯಲ್ಲಿ ಗುಂಡು ಹೊಡೆದು ಬಿಲ್ಡಪ್ ತೆಗೆದುಕೊಂಡಿರುವ ಸಾಧ್ಯತೆ ಇದೆ ಎಂದು ಹೇಳಲಾಗಿತ್ತು.. ಅದೇನೇ ಇದ್ದರೂ ಸ್ವಾಮೀಜಿಯಾಗಿದ್ದವರು ಮದ್ಯಪಾನ ಮಾಡಿ ಗಲಾಟೆ ಮಾಡಿದ್ದೂ ಅಲ್ಲದೇ, ಬಂದೂಕು ಕೈಯಲ್ಲಿ ಹಿಡಿದು ಗಾಳಿಯಲ್ಲಿ ಗುಂಡು ಹಾರಿಸಿ ಬೆದರಿಸುವ ಕೆಲಸ ಮಾಡುತ್ತಿರುವ ಸ್ವಾಮೀಜಿಗಳ ನಡೆಗೆ ತೀವ್ರ ಆಕ್ರೋಶ ವ್ಯಕ್ತವಾಗಿದೆ.




