——————————————ಕೊಲೆ ಪ್ರಕರಣದ ಆರೋಪ:
ಬೆಂಗಳೂರು: ರೌಡಿ ಶೀಟರ್ ಶಿವಪ್ರಕಾಶ ಅಲಿಯಾಸ್ ಬಿಕ್ಲು ಶಿವು ಕೊಲೆ ಪ್ರಕರಣದ ಆರೋಪಿಯಾಗಿರುವ ಕೆ.ಆರ್. ಪುರ ಕ್ಷೇತ್ರದ ಬಿಜೆಪಿ ಶಾಸಕ ಭೈರತಿ ಬಸವರಾಜ ಅವರು ನಿರೀಕ್ಷಣಾ ಜಾಮೀನು ಕೋರಿ ಹೈಕರ್ಟ್ ಗೆ ಎರಡನೇ ಬಾರಿ ಅರ್ಜಿ ಸಲ್ಲಿಸಿದ್ದಾರೆ.
ಪ್ರಕರಣದಲ್ಲಿ ಬಂಧನದ ಭೀತಿ ಎದುರಿಸುತ್ತಿರುವ ಶಾಸಕ ಭೈರತಿ ಬಸವರಾಜ ಅವರ ನಿರೀಕ್ಷಣಾ ಜಾಮೀನು ರ್ಜಿಯನ್ನು ‘ಶಾಸಕರು- ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆ’ ಯ ಸೆಷನ್ಸ್ ನ್ಯಾಯಾಲಯ ಮಂಗಳವಾರವಷ್ಟೇ ತಿರಸ್ಕರಿಸಿತ್ತು.
ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಭೈರತಿ ಬಸವರಾಜ ಅವರು ಬುಧವಾರ ಹೈಕರ್ಟ್ ನಲ್ಲಿ ಕ್ರಿಮಿನಲ್ ರ್ಜಿ ಸಲ್ಲಿಸಿದ್ದಾರೆ. ಶುಕ್ರವಾರ ಅರ್ಜಿ ವಿಚಾರಣೆ ನಿಗದಿಯಾಗಿದೆ.




