ಅಥಣಿ : ಪ್ರತಿಯೊಬ್ಬರು ಜೀವನದಲ್ಲಿ ಯಶಸ್ವಿಯಾಗಲು ವಿದ್ಯಾರ್ಥಿಗಳು ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳಬೇಕು ಎಂದು ಪ್ರಾಚಾರ್ಯರಾದ ಎಂ.ಪಿ. ಮೇತ್ರಿ ಅವರು ಹೇಳಿದರು
ಅವರು ಅಥಣಿ ಜಾಧವಜಿ ಆನಂದಜಿ ಹಿರಿಯ ಮಾಧ್ಯಮಿಕ ಶಾಲೆ, ವಾರ್ಷಿಕೋತ್ಸವ ಹಾಗೂ ಪಾರಿತೋಷಕ ವಿತರಣಾ ಸಮಾರಂಭದ ವಾರ್ಷಿಕ ಸ್ನೇಹ ಸಮ್ಮೇಳನದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದರು. ಮಕ್ಕಳು ಸರ್ವಾಂಗೀಣ ಅಭಿವೃದ್ಧಿಗೆ ಶಿಕ್ಷಕ ಮತ್ತು ಶಿಕ್ಷಣ ಸಂಸ್ಥೆಗಳ ಪಾತ್ರ ಪ್ರಮುಖವಾಗಿರುತ್ತದೆ. ಇಂದಿನ ಮಕ್ಕಳಿಗೆ ಗುಣಾತ್ಮಕ ಶಿಕ್ಷಣದ ಜೊತೆಗೆ ನೈತಿಕ ಮೌಲ್ಯದ ಶಿಕ್ಷಣವನ್ನು ಕಲಿಸಿಕೊಡುವುದು ಬಹಳ ಅಗತ್ಯವಾಗಿದೆ. ಈ ನಿಟ್ಟಿನಲ್ಲಿ ಜೆ.ಇ ಸಂಸ್ಥೆಯು ಕಾರ್ಯನಿರ್ವಹಿಸುತ್ತಿರುವುದು ಹೆಮ್ಮೆಯ ಸಂಗತಿ. ಜೆ.ಇ ಸಂಸ್ಥೆಯಲ್ಲಿ ಶಿಕ್ಷಣ ಪಡೆಯುವ ಮಕ್ಕಳ ಭವಿಷ್ಯ ರೂಪಿಸುವ ಕನಸು ಹೊತ್ತು ಈ ಸಂಸ್ಥೆಯನ್ನು ಮುನ್ನಡೆಸುತ್ತಿದ್ದಾರೆ. ಶಿಕ್ಷಣವು ಪ್ರತಿಯೊಬ್ಬರಲ್ಲಿ ಆತ್ಮವಿಶ್ವಾಸ ಮತ್ತು ವ್ಯಕ್ತಿತ್ವ ವಿಕಾಸ ರೂಪಿಸುತ್ತದೆ ಎಂದು ಅನೇಕ ವಿದ್ಯಾರ್ಥಿಗಳಿಗೆ ಕಿವಿ ಮಾತುಗಳನ್ನು ಹೇಳಿದರು. ಈ ಸಂಸ್ಥೆಯು ಇನ್ನಷ್ಟು ಹೆಮ್ಮರವಾಗಿ ಬೆಳೆಯಲಿ ಎಂದು ಶುಭ ಹಾರೈಸಿದರು.

ಸಮಾರಂಭದ ಅಧ್ಯಕ್ಷತೆಯನ್ನು ಶ್ರೀ ಅವಿನಾಶ ಎಮ್. ಸೋಲಾಪೂರಕರ ವಹಿಸಿ ಮಾತನಾಡಿ ಶಿಕ್ಷಣ ನಮ್ಮ ಭೌತಿಕ ಬೆಳವಣಿಗೆಯನ್ನು ಹೆಚ್ಚಿಸುವುದರ ಜೊತೆಗೆ ನಮ್ಮ ಬದುಕಿನ ದೋಣಿ ಸರಿಯಾದ ದಿಕ್ಕಿನಲ್ಲಿ ಚಲಿಸುವಂತೆ ಮಾಡುತ್ತದೆ. ಆದ್ದರಿಂದ ಇಂದಿನ ಮಕ್ಕಳಿಗೆ ಒಳ್ಳೆಯ ಗುಣಮಟ್ಟದ ಶಿಕ್ಷಣವನ್ನು ನೀಡಬೇಕೆಂಬ ನಿರೀಕ್ಷೆಯನ್ನು ಎಲ್ಲ ಪಾಲಕರು ಹೊಂದಿರುತ್ತಾರೆ. ಅವರ ನಿರೀಕ್ಷೆಗೆ ಪೂರಕವಾಗಿ ಶತಮಾನ ಕಂಡ ಈ ಶಿಕ್ಷಣ ಸಂಸ್ಥೆಯಲ್ಲಿ ಇಂದು ಸಾವಿರಾರು ಮಕ್ಕಳಿಗೆ ಒಳ್ಳೆಯ ಗುಣಮಟ್ಟದ ಶಿಕ್ಷಣವನ್ನು ನೀಡಲಾಗುತ್ತಿದೆ. ನಮ್ಮ ಶಾಲೆಯಲ್ಲಿ ಕಲಿತ ವಿದ್ಯಾರ್ಥಿಗಳು ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಸಾಧನೆ ಮಾಡಿರುವುದು ನಮ್ಮೆಲ್ಲರಿಗೆ ಹೆಮ್ಮೆ ಎನಿಸುತ್ತದೆ. ನಮ್ಮ ಶಾಲೆಯ ಉಪಪ್ರಾಚಾರ್ಯರು,ಬೋಧಕರು ಮತ್ತು ಬೋಧಕೇತರ ಸಿಬ್ಬಂದಿಯ ಪ್ರಾಮಾಣಿಕ ಸೇವೆಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ಸಮಾರಂಭದಲ್ಲಿ ವಿವಿಧ ಸ್ಪರ್ಧಾತ್ಮಕ ಪರೀಕ್ಷೆ, ಕ್ರೀಡೆ, ವಿಜ್ಞಾನ ವಸ್ತು ಪ್ರದರ್ಶನ ಸೇರಿದಂತೆ ಇನ್ನಿತರ ವಿಭಾಗಗಳಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಸಂಸ್ಥೆಯ ವತಿಯಿಂದ ಸನ್ಮಾನಿಸಲಾಯಿತು. ನಂತರ ವಿದ್ಯಾರ್ಥಿಗಳಿಂದ ನಡೆದ ಸಾಂಸ್ಕೃತಿಕ ಕಾರ್ಯಕ್ರಮಗಳು ಸಭಿಕರನ್ನು ರಂಜಿಸಿದವು.
ಈ ಕಾರ್ಯಕ್ರಮದಲ್ಲಿ ಜಿ ಐ ಪಾಟೀಲ ಉಪಪ್ರಾಚಾರ್ಯರು, ಪ್ರಸ್ತಾವಿಕ ಮಾತನಾಡಿದರು. ಎಸ್ ಎಸ್ ಗಸ್ತಿ ಅವರು ವರದಿ ವಾಚನ ಮಾಡಿದರು. ಎಸ್ ಬಿ ಇಂಗಳಿ ಅವರು ಪರಿಚಯಿಸಿದರು.
ಕಾರ್ಯಕ್ರಮದಲ್ಲಿ ಆರ್ ಎ ಕುಲಕರ್ಣಿ, ಉದಯ್ ಕುಮಾರ್ ಕೋಟಿವಾಲೆ, ವಿದ್ಯಾರ್ಥಿ ಪ್ರತಿನಿಧಿ ಮತ್ತು ಎಲ್ಲಾ ಬೋಧಕ ಬೋಧಕೆತರ ಸಿಬ್ಬಂದಿ ವರ್ಗದವರು ಮತ್ತು ಪಾಲಕರು ಪೋಷಕರು ಪತ್ರಕರ್ತರು ಮುದ್ದು ವಿದ್ಯಾರ್ಥಿ ವಿದ್ಯಾರ್ಥಿನಿಯರು ಪಾಲ್ಗೊಂಡಿದ್ದರು. ಈ ಕಾರ್ಯಕ್ರಮವನ್ನು ಜಿ.ಐ. ಪಾಟೀಲ ಸ್ವಾಗತದರು. ಎಸ್ ಎನ್ ಎಂ ಕಾಂಬಳೆ ಹಾಗೂ ಸವಿತಾ ದೇಶಪಾಂಡೆ ನಿರೂಪಿಸಿದರು. ಪ್ರೀತಿ ಕೋಕಟನೂರ ವಂದಿಸಿದರು




