ಚಿಕ್ಕಬಳ್ಳಾಪುರ: ಟಿಪ್ಪರ್ ಲಾರಿ ಮತ್ತು ಬೈಕ್ ನಡುವೆ ಡಿಕ್ಕಿಯಾಗಿ ಸಂಭವಿಸಿದ ಭೀಕರ ಅಪಘಾತದಲ್ಲಿ ನಾಲ್ವರು ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಚಿಕ್ಕಬಳ್ಳಾಪುರ ನಗರದ ಹೊರವಲಯದ ಜಿಲ್ಲಾಡಳಿತ ಭವನದ ಸಮೀಪ ಅಜ್ಜವಾರ ಬಳಿ ಗುರುವಾರ ರಾತ್ರಿ 9:30 ಸುಮಾರಿಗೆ ಅಪಘಾತ ಸಂಭವಿಸಿದೆ.
ಅಜ್ಜವಾರ ಗ್ರಾಮದ ನಂದೀಶ್, ನರಸಿಂಹ, ಅರುಣ್, ಮನೋಜ್ ಮೃತಪಟ್ಟವರು.ನಾಲ್ವರೂ ಸ್ನೇಹಿತರಾಗಿದ್ದು, ಚಿಕ್ಕಬಳ್ಳಾಪುರದಿಂದ ಸ್ವಗ್ರಾಮಕ್ಕೆ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ.
ಶಿಡ್ಲಘಟ್ಟ ಕಡೆಯಿಂದ ಚಿಕ್ಕಬಳ್ಳಾಪುರ ಕಡೆಗೆ ಅತಿ ವೇಗವಾಗಿ ಬಂದ ಟಿಪ್ಪರ್ ಲಾರಿ ಚಕ್ರವಾಹನಕ್ಕೆ ಡಿಕ್ಕಿ ಹೊಡೆದು ಬೈಕ್ ನಲ್ಲಿದ್ದ ನಾಲ್ವರು ಸ್ಥಳದಲ್ಲಿ ಮೃತಪಟ್ಟಿದ್ದಾರೆ. ಚಿಕ್ಕಬಳ್ಳಾಪುರ ಗ್ರಾಮಾಂತರ ಠಾಣೆ ಪೋಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ಜಿಲ್ಲಾಸ್ಪತ್ರೆ ಶವಾಗಾರಕ್ಕೆ ಸಾಗಿಸಲಾಗಿದೆ.




