ರಾಯಚೂರು: ರಾಜ್ಯ ಸರ್ಕಾರ ಜಾರಿಗೆ ತರುತ್ತಿರುವ ದ್ವೇಷ ಭಾಷಣ ಹಾಗೂ ದ್ವೇಷ ಅಪರಾಧಗಳ ಪ್ರತಿಬಂಧಕ ಕಾಯ್ದೆಯನ್ನು ವಾಪಸ್ ಪಡೆಯಬೇಕು ಎಂದು ಒತ್ತಾಯಿಸಿ ಭಾರತೀಯ ಜನತಾ ಪಾರ್ಟಿ ಜಿಲ್ಲಾ ಘಟಕದ ವತಿಯಿಂದ ಶುಕ್ರವಾರ ಪ್ರತಿಭಟನೆ ನಡೆಯಿತು.
ನಗರದ ಡಾ.ಬಿ.ಆರ್ ಅಂಬೇಡ್ಕರ್ ವೃತ್ತದಲ್ಲಿ ಶಾಸಕ ಡಾ.ಶಿವರಾಜ ಪಾಟೀಲ ನೇತೃತ್ವದಲ್ಲಿ ಕಾರ್ಯಕರ್ತರುಣ ಮುಖಂಡರು ಪ್ರತಿಭಟನೆ ನಡೆಸಿ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ದ್ವೇಷ ಭಾಷಣ ಪ್ರತಿಬಂಧಕ ಕಾಯ್ದೆ ನಾಗರಿಕರ ಹಕ್ಕುಗಳನ್ನು ಕಸಿದುಕೊಳ್ಳುತ್ತದೆ. ಸಂವಿಧಾನದ 19(1) ಪರಿಚ್ಛೇದ (2) ಪರಿಚ್ಛೇದಡಿ ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಉಲ್ಲಂಘನೆಯಾಗಿದೆ. ಸರ್ಕಾರದ ವಿರುದ್ಧ ಟೀಕೆ, ಟಿಪ್ಪಣೆ ಮಾಡುವುದು ದ್ವೇಷ ಭಾಷಣ ಮಾಡಿದಂತೆ ಇದರ ವ್ಯಾಖ್ಯಾನವೇ ಅಸ್ಪಷ್ಟವಾಗಿದೆ ಎಂದು ದೂರಿದರು.
ವರದಿಗಾರರು ಗಾರಲ ದಿನ್ನಿ ವೀರನ ಗೌಡ




