—————–ಹೆಚ್ಚುವರಿ ವಿಕೆಟ್ ಕೀಪರ್-ಬ್ಯಾಟರ್ ಸ್ಥಾನಕ್ಕೆ ತೀವ್ರ ಪೈಪೋಟಿ
ನವದೆಹಲಿ: ನ್ಯೂಜಿಲೆಂಡ್ ವಿರುದ್ಧ ಜನವರಿ ೧೧ ರಿಂದ ಆರಂಭವಾಗುವ ೩ ಪಂದ್ಯಗಳ ಏಕದಿನ ಕ್ರಿಕೆಟ್ ಸರಣಿಗೆ ಭಾರತ ತಂಡ ಪ್ರಕಟವಾಗಲಿದ್ದು, ಹೆಚ್ಚುವರಿ ವಿಕೆಟ್ ಕೀಪರ್ ಬ್ಯಾಟರ್ ಸ್ಥಾನಕ್ಕೆ ತೀವ್ರ ಪೈಪೋಟಿ ಕಂಡು ಬಂದಿದೆ.
ಸರಣಿಗೆ ಈಗ ಕೆ.ಎಲ್. ರಾಹುಲ್ ರೂಪದಲ್ಲಿ ವಿಕೆಟ್ ಕೀಪರ್ ಬ್ಯಾಟರ್ ಸ್ಥಾನ ಭದ್ರವಾಗಿದ್ದು, ಹೆಚ್ಚುವರಿ ವಿಕೆಟ್ ಕೀಪರ್ ಬ್ಯಾಟರ್ ಸ್ಥಾನಕ್ಕೆ ವೃಷಬ್ ಪಂತ್, ದ್ರುವ್ ಜುರೆಲ್ ಹಾಗೂ ಇಶಾನ್ ಕಿಶನ್ ನಡುವೆ ತೀವ್ರ ಪೈಪೋಟಿ ಎದುರಾಗಿದ್ದು, ಈ ಆರೋಗ್ಯಕರ ಪೈಪೋಟಿ ಭಾರತ ಆಯ್ಕೆದಾರರಿಗೆ ಈ ಮೂವರಲ್ಲಿ ಯಾರನ್ನೂ ಆಯ್ಕೆ ಮಾಡಬೇಕೆಂಬ ಖುಷಿಯ ತಲೆ ನೋವು ಎದುರಾಗಿದೆ.
ಜನವರಿ ೧೧ ರಿಂದ ನ್ಯೂಜಿಲೆಂಡ್ ವಿರುದ್ಧ ಏಕದಿನ ಸರಣಿ




