ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗಾಗಿ ಜಾರಿ ಮಾಡಲಾಗಿರುವ ಶಕ್ತಿ ಯೋಜನೆಯನ್ನು ಸರಳೀಕರಿಸಲು ರಾಜ್ಯ ಸರ್ಕಾರ ಮುಂದಾಗಿದೆ.
ಶೀಘ್ರದಲ್ಲೇ ಫಲಾನುಭವಿಗಳಿಗೆ ಸ್ಮಾರ್ಟ್ ಕಾರ್ಡ್ ವಿತರಿಸಲಿದೆ. ಇದರಿಂದ ಮಹಿಳೆಯರಿಗೆ ಆಧಾರ್ ಕಾರ್ಡ್ ಇಟ್ಟುಕೊಂಡು ಪ್ರಯಾಣ ಮಾಡುವ ಕಿರಿಕಿರಿ ತಪ್ಪಲಿದೆ.
ಸಾರಿಗೆ ಬಸ್ ನಲ್ಲಿ ಪ್ರಯಾಣಿಸುವ ರಾಜ್ಯದ ಮಹಿಳೆಯರು ಇನ್ಮುಂದೆ ಸ್ಮಾರ್ಟ್ ಕಾಡ್೯ ತೋರಿಸಿದ್ರೆ ಸಾಕು, ಆಧಾರ್ ಕಾರ್ಡ್ ತೆಗೆದುಕೊಂಡು ಹೋಗುವ ಅಗತ್ಯವಿಲ್ಲ. ಶೀಘ್ರವೇ ಮಹಿಳೆಯರಿಗೆ ಸ್ಮಾರ್ಟ್ ಕಾರ್ಡ್ ಉಚಿತವಾಗಿ ಕೈಸೇರಲಿದೆ.
ರಾಜ್ಯ ಸರ್ಕಾರದ ಶಕ್ತಿ ಯೋಜನೆ ಜಾರಿ ಯಾದ 2.5 ವರ್ಷಗಳ ನಂತರ ಇದೀಗ ಸ್ಮಾರ್ಟ್ ಕಾರ್ಡ್ ನೀಡಲು ಸಾರಿಗೆ ಇಲಾಖೆ ನಿರ್ಧರಿಸಿದೆ. ಸಂಪುಟ ಸಭೆಯಲ್ಲಿ ಅನು ಮೋದನೆ ಅಧಿಕಾರಿಗಳು ಮುಂದಾಗಿದ್ದಾರೆ.
ಗ್ಯಾರಂಟಿ ಅರ್ಹರಿಗೆ ಮಾತ್ರ ದೊರಕುವಂತೆ ಸರ್ಕಾರ ಈಗಾಗಲೇ ಹಲವು ಕ್ರಮ ಕೈಗೊಂಡಿದೆ. ಶಕ್ತಿ ಯೋಜನೆ ಲಾಭ ರಾಜ್ಯದ ಮಹಿಳೆಯರು ಮಾತ್ರ ಪಡೆಯುವಂತೆ ಮಾಡಲು ಸ್ಮಾರ್ಟ್ಕಾರ್ಡ್ ನೀಡಲು ಸಾರಿಗೆ ಇಲಾಖೆ ಯೋಜಿಸಿದ್ದು, ಅದಕ್ಕಾಗಿ ಅನುಮತಿ ಕೋರಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ.
ಸ್ಮಾರ್ಟ್ ಕಾರ್ಡ್ಗಾಗಿ ಮಹಿಳಾ ಪ್ರಯಾಣಿ ಕರಿಂದ ಶುಲ್ಕ ಪಡೆಯಬೇಕೇ ಅಥವಾ ಸರ್ಕಾರದಿಂದಲೇ ವೆಚ್ಚ ಭರಿಸಲಾಗುತ್ತದೆಯೇ ಎಂಬುದು ನಿರ್ಧಾರವಾಗಲಿದೆ. ಸದ್ಯ ಸಾರಿಗೆ ನಿಗಮಗಳಿಂದ ಸಲ್ಲಿಕೆಯಾಗಿರುವ ಪ್ರಸ್ತಾವನೆಯಲ್ಲಿ ಶುಲ್ಕದ ವಿಚಾರ ಬಗ್ಗೆ ಸ್ಪಷ್ಟತೆಯಿಲ್ಲ. ಇನ್ನು, ಸಂಪುಟ ಒಪ್ಪಿಗೆ ದೊರೆತ ನಂತರ ಸೇವಾ ಸಿಂಧು ವೆಬ್ ಸೈಟ್ನಲ್ಲಿ ದಾಖಲೆಗಳನ್ನು ಸಲ್ಲಿಸಿ ಮಹಿಳಾ ಪ್ರಯಾಣಿಕರು ಸ್ಮಾರ್ಟ್ ಕಾರ್ಡ್ಗೆ ಅರ್ಜಿ ಸಲ್ಲಿಸುವ ವ್ಯವಸ್ಥೆ ಜಾರಿ ಮಾಡಲಾಗುತ್ತದೆ. ಪರಿಶೀಲಿಸಿ, ಬಸ್ ನಿಲ್ದಾಣ ಅಥವಾ ಸೂಕ್ತ ಸ್ಥಳಗಳಲ್ಲಿ ವಿತರಿಸಲು ನಿಗಮಗಳು ಈಗಾಗಲೇ ನಿರ್ಧರಿಸಿವೆ.




