Ad imageAd image

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸ್ವಸಹಾಯ ಸಂಘಗಳ ಒಕ್ಕೂಟ ಕಾರ್ಯಕ್ರಮ

Bharath Vaibhav
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸ್ವಸಹಾಯ ಸಂಘಗಳ ಒಕ್ಕೂಟ ಕಾರ್ಯಕ್ರಮ
WhatsApp Group Join Now
Telegram Group Join Now

ನಿಪ್ಪಾಣಿ  : ಶ್ರೀ ಧರ್ಮಸ್ಥಳ ಶ್ರೀ ವರಮಹಾಲಕ್ಷ್ಮಿ ಪೂಜಾ ವ್ಯವಸ್ಥೆ ಸಮಿತಿ ವತಿಯಿಂದ ವರಮಹಾಲಕ್ಷ್ಮಿ ಮತ್ತು ಧಾರ್ಮಿಕ ಸಭಾ ಕಾರ್ಯಕ್ರಮ ಕೊಹ್ಲಿ ಹಾಗೂ ಹೊಗನೊಳಿಯಲ್ಲಿ ವಿಜೃಂಭಣೆಯಿಂದ ನಡೆಯಿತು.

ನಿಪ್ಪಾಣಿ ತಾಲೂಕಿನ ಕುರ್ಲಿ ವಲಯದ ಕೊಗನೊಳಿಯಲ್ಲಿ ಶ್ರೀ ವರಮಹಾಲಕ್ಷ್ಮಿ ಪೂಜೆ ಮತ್ತು ಧಾರ್ಮಿಕ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು ಪ್ರಾರಂಭದಲ್ಲಿ 101 ಸುಮಂಗಲಿಯರು ಬೆಳಿಗ್ಗೆ 8.30 ರಿಂದ 10 ಗಂಟೆವರೆಗೆ ಸಾಮೂಹಿಕ ಪೂಜೆ ನೆರವೇರಿತು.

ನಂತರ ಸಭಾ ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಪರಮಾತ್ಮರಾಜ ಮಹಾರಾಜರು ಶ್ರೀ ದತ್ತ ಮಠ ಆಡಿ ಇವರು ವಹಿಸಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಾರ್ಯಕ್ರಮಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ ಸಂಸ್ಥೆಯ ಸಮಾಜಮುಖಿ ಕಾರ್ಯಕ್ರಮಗಳನ್ನು ಸ್ವಸಹಾಯ ಸಂಘದ ಸದಸ್ಯರು ಸದ್ಬಳಕೆ ಮಾಡಬೇಕೆಂದು ತಿಳಿಸಿ ಆಶೀರ್ವಚನ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗ್ರಾಮ ಪಂಚಾಯತಿ ಅಧ್ಯಕ್ಷರಾದ ಅಕ್ಕತಾಯಿ ಖೋತ್ ವಹಿಸಿದ್ದರು ಉದ್ಘಾಟಕರಾಗಿ ಮಾಜಿ ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷರಾದ ಶ್ರೀ ಪಂಕಜ್ ವೀರಕುಮಾರ್ ಪಾಟೀಲ್ ಮಾತನಾಡಿ ಶ್ರೀ ಕ್ಷೇತ್ರ ಧರ್ಮಸ್ಥಳ ಸಂಸ್ಥೆವು ಕಳೆದ 15 ವರ್ಷಗಳಿಂದ ನಮ್ಮ ಭಾಗದಲ್ಲಿ ಅನೇಕ ಜನಕಲ್ಯಾಣ ಸ್ವಸಹಾಯ ಸಂಘದ ಸದಸ್ಯರಿಗೆ ಆರ್ಥಿಕ ಶಿಸ್ತು ಅವರ ಆರ್ಥಿಕ ಸಬಲೀಕರಣದಲ್ಲಿ ಸಂಸ್ಥೆಯ ಪಾತ್ರ ಬಹುದೊಡ್ಡದಿದೆ ಎಂದು ತಿಳಿಸಿದರು ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಚಿಕ್ಕೋಡಿ ಜಿಲ್ಲೆಯ ಗೌರವಾನ್ವಿತ ಜಿಲ್ಲಾ ನಿರ್ದೇಶಕರಾದ ಶ್ರೀ ವಿಠ್ಠಲ್ ಸಾಲಿಯಾನ್ ಮಾತನಾಡಿ ಸಂಸ್ಥೆಯು ಪರಮಪೂಜ್ಯ ಡಾ ಡಿ ವೀರೇಂದ್ರ ಹೆಗ್ಡೆಜಿಯವರ ಮಾರ್ಗದರ್ಶನದಲ್ಲಿ ನಡೆಯುತ್ತಿದ್ದು ಸಂಸ್ಥೆಯ ಮುಖ್ಯ ಉದ್ದೇಶ ಸ್ವಸಹಾಯ ಸಂಘದ ಸದಸ್ಯರನ್ನು ಸಾಮಾಜಿಕವಾಗಿ ಶೈಕ್ಷಣಿಕವಾಗಿ ಮತ್ತು ಆರ್ಥಿಕವಾಗಿ ಸಮಾಜದ ಮುಖ್ಯ ವಾಹಿನಿಗೆ ತರುವ ಉದ್ದೇಶವಾಗಿದೆ.

ಜನರಲ್ಲಿ ಧಾರ್ಮಿಕ ಮನೋಭಾವನೆ ವೃದ್ಧಿಯಾಗಬೇಕೆಂಬ ಉದ್ದೇಶದಿಂದ ನಾವು ಸ್ವಸಹಾಯ ಸಂಘದ ಸದಸ್ಯರು ಗಣ್ಯರ ಸಹಕಾರದೊಂದಿಗೆ ಧಾರ್ಮಿಕ ಕಾರ್ಯಕ್ರಮಗಳನ್ನು ಮಾಡುತ್ತಿದ್ದೇವೆ ಸಂಸ್ಥೆಯ್ ಎಲ್ಲ ಸಮಾಜಮುಖಿ ಕಾರ್ಯಕ್ರಮಗಳನ್ನ ಅನುಷ್ಠಾನೀಸಲು ಗಣ್ಯರ ಮತ್ತು ಶ್ರೀಗಳ ಪಾತ್ರ ಮಹತ್ತರವಾಗಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಚಂದ್ರಕಾಂತ್ ಪಾಟೀಲ್ ರಾಜಗೊಂಡ ಪಾಟೀಲ್ ಮಯೂರ್ ಭಂಡಾರಿ ನೀಲೇಶ್ ಖೋತ್ ಜಿಲ್ಲಾ ಜನಜಾಗೃತಿ ವೇದಿಕೆ ಸದಸ್ಯರಾದ ಶ್ರೀಮತಿ ಮನಾಲಿ ಮಾನೆ ಅಶ್ವಿನಿ ಲೋಹಾರ್ ಸ್ವಾತಿ ಶಿಂತ್ರೆ ಉಪಸ್ಥಿತರಿದ್ದರು ಕಾರ್ಯಕ್ರಮದಲ್ಲಿ ಸುಮಾರು 1500 ಜನ ಸ್ವಸಹಾಯ ಸಂಘದ ಸದಸ್ಯರು ಭಾಗವಹಿಸಿದ್ದು ವಿಶೇಷವಾಗಿತ್ತು ಹಾಗೂ ಬಂದಿರುವ ಅಷ್ಟು ಜನರಿಗೆ ಪ್ರಸಾದದ ವ್ಯವಸ್ಥೆಯನ್ನು ಶ್ರೀ ವರಮಹಾಲಕ್ಷ್ಮಿ ಸದಸ್ಯರು ಬಲ ಅಚ್ಚುಕಟ್ಟಾಗಿ ನಿರ್ವಹಣೆ ಮಾಡಿದರು ತಾಲೂಕಿನ ಯೋಜನಾಧಿಕಾರಿಗಳು ಶ್ರೀ ಮಂಜುನಾಥ ಪ್ರಾಸ್ತಾವಿಕ ನುಡಿಯೊಂದಿಗೆ ಸ್ವಾಗತಿಸಿದರು ವಲಯದ ಮೇಲ್ವಿಚಾರಕರಾದ್ ಅನಿಲ್ ದಾವನೆ ನಿರೂಪಣೆ ಮಾಡಿ ವಂದಿಸಿದರು.

ವರದಿ : ರಾಜು ಮುಂಡೆ 

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!