
ಹೊಸ ವರ್ಷಾಚರಣೆ ಪ್ರಯುಕ್ತ ಉತ್ತರ ಪ್ರದೇಶದ ಮಥುರಾದಲ್ಲಿ ಬಾಲಿವುಡ್ ನಟಿ ಸನ್ನಿ ಲಿಯೋನ್ ಅವರ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಮಠಾಧೀಶರ ಆಕ್ಷೇಪಣೆ ಹಿನ್ನೆಲೆಯಲ್ಲಿ ಕಾರ್ಯಕ್ರಮವನ್ನು ರದ್ದುಗೊಳಿಸಲಾಗಿದೆ.
ಸನ್ನಿ ಲಿಯೋನ್ ಅವರನ್ನು ಮಥುರಾಕ್ಕೆ ಆಹ್ವಾನಿಸುವ ಮೂಲಕ ಕೆಲವರು ಸನಾತನ ಧರ್ಮದ ಬಗ್ಗೆ ಅಪಪ್ರಚಾರ ಮಾಡಲು ಬಯಸುತ್ತಿದ್ದಾರೆ ಎಂದು ಶ್ರೀ ಕೃಷ್ಣ ಜನ್ಮಭೂಮಿ ಸಂಘರ್ಷ ನ್ಯಾಸ್‌ನ ದಿನೇಶ್ ಫಲಹರಿ ತಿಳಿಸಿದ್ದಾರೆ. ಸನ್ನಿ ಲಿಯೋನ್ ಅವರು ಅಶ್ಲೀಲತೆಯನ್ನು ಪ್ರಚಾರ ಮಾಡುತ್ತಾರೆ. ಅಂತವರನ್ನು ಬ್ರಿಜ್ ಭೂಮಿಯಿಂದ ದೂರವಿಡಬೇಕು ಎಂದೂ ದಿನೇಶ್ ಹೇಳಿದ್ದಾರೆ.




