ಬೆಂಗಳೂರು: ರಸ್ತೆ ಅಪಘಾತದಲ್ಲಿ ಮೃತಪಟ್ಟ ಹಿರಿಯ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಅವರ ಪುತ್ರಿ ಚೈತನ್ಯ ಅವರಿಗೆ ವಿಶೇಷ ಪ್ರಕರಣದಡಿ ಸಚಿವಾಲಯದಲ್ಲಿ ಅನುಕಂಪದ ಆಧಾರದಲ್ಲಿ ಸಿ ದರ್ಜೆ ಸಹಾಯಕಿ ಹುದ್ದೆ ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ.
ಮಹಾಂತೇಶ್ ಬೀಳಗಿ ಕುಟುಂಬದವರಿಗೆ ಅನುಕಂಪದ ಹುದ್ದೆ ನೀಡುವ ಬಗ್ಗೆ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಿದ್ದು, ಚೈತನ್ಯ ಅವರಿಗೆ ಅನುಕಂಪದ ಆಧಾರದ ಮೇಲೆ ಗ್ರೂಪ್ ಸಿ ಹುದ್ದೆ ನೀಡಲು ಸಂಪುಟ ಸಭೆ ಅನುಮೋದನೆ ನೀಡಿದೆ. ಜನಾನುರಾಗಿ ಅಧಿಕಾರಿಯಾಗಿದ್ದ ಮಹಾಂತೇಶ್ ಬೀಳಗಿ ಜೇವರ್ಗಿ ಬಳಿ ನಡೆದ ಅಪಘಾತದಲ್ಲಿ ಮೃತಪಟ್ಟಿದ್ದರು.




