ಬೆಂಗಳೂರು : ಖಾಸಗಿ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ ವೈದ್ಯೆಗೆ ಆಕೆ ವಾಸ ಮಾಡುತ್ತಿದ್ದ ಪಿಜಿ ಗೇಟ್ ಎದುರಲ್ಲೇ ಕಿರುಕುಳ ನೀಡಿದ ಆರೋಪದಲ್ಲಿ ಬೀದಿ ಕಾಮುಕನನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ಸೋಲದೇವನಹಳ್ಳಿ ಪೊಲೀಸರಿಂದ ಬೀದಿ ಕಾಮುಕ ರಾಕೇಶ್ ಬಂಧನವಾಗಿದೆ.
ಡಿಸೆಂಬರ್ 17 ರಂದು ಈ ಘಟನೆ ನಡೆದಿದ್ದು, ತಡವಾಗಿ ಈ ವಿಚಾರ ಬೆಳಕಿಗೆ ಬಂದಿದೆ.ಅಂದು ರಾತ್ರಿ 12.45ರ ಸುಮಾರಿಗೆ ಕೆಲಸ ಮುಗಿಸಿ ವೈದ್ಯೆ ಪಿಜಿಗೆ ತೆರಳುತ್ತಿದ್ದರು. ಈ ವೇಳೆ ಪಿಜಿ ಗೇಟ್ ಬಳಿ ಆಕೆಯ ಜೊತೆ ಅಸಭ್ಯ ವರ್ತನೆ ತೋರಲಾಗಿದೆ. ಚಿಕ್ಕಬಾಣಾವಾರದ ಎಜಿಬಿ ಲೇಔಟ್ ನಲ್ಲಿ ಘಟನೆ ನಡೆದಿದೆ.
ಬೈಕ್ ನಲ್ಲಿ ಬಂದಿದ್ದ ರಾಕೇಶ್ ಎಂಬಾತನಿಂದ ಕೃತ್ಯ ನಡೆದಿದೆ. ಹೆಸರಘಟ್ಟ ರಸ್ತೆಯಲ್ಲಿರುವ ಖಾಸಗಿ ಆಸ್ಪತ್ರೆಯಲ್ಲಿ ವೈದ್ಯೆ ಕೆಲಸ ಮಾಡುತ್ತಿದ್ದಾರೆ ಎನ್ನಲಾಗಿದೆ




